Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಜು.25ರಿಂದ ಎಸ್ಐಆರ್ ಜಾಗೃತಿ ಅಭಿಯಾನಕ್ಕೆ ಬಿಜೆಪಿ ಸಜ್ಜು: ಬಿ.ವೈ. ವಿಜಯೇಂದ್ರ

---Advertisement---

ಶಿವಮೊಗ್ಗಜುಲೈ.22: ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಎಸ್ ಐಆರ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜುಲೈ 25 ಮತ್ತು 26ರಂದು ಬಿಜೆಪಿ ಬೃಹತ್ ಅಭಿಯಾನ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಿದ್ದಾರೆ. ಸುಮಾರು 1 ಕೋಟಿ ಮನೆಗಳಿಗೆ ಎಸ್ಐಆರ್ ಎನ್ಯೂಮರೇಷನ್ ಫಾರಂ ತಲುಪಿಸುವ ಗುರಿ ಹೊಂದಲಾಗಿದ್ದು, ಪ್ರತಿ ಕಾರ್ಯಕರ್ತನಿಗೆ ಕನಿಷ್ಠ 20 ಮನೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ ಎಂದರು.

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ತಳೆದ ವಿಜಯೇಂದ್ರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟ ವಿಸ್ತರಣೆ ಮತ್ತು ಬಿಡದಿ ರಿಯಲ್ ಎಸ್ಟೇಟ್ ವಿಚಾರಗಳಲ್ಲೇ ಮುಳುಗಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಸಿಎಂ ದೆಹಲಿ ಪ್ರವಾಸದಲ್ಲೇ ಕಾಲ ಕಳೆಯುತ್ತಿದ್ದಾರೆ. ಕೇವಲ ಕನಕಪುರಕ್ಕೆ ಸೀಮಿತವಾಗದೆ ಇಡೀ ರಾಜ್ಯದ ಮುಖ್ಯಮಂತ್ರಿಯಾಗಿ ತಕ್ಷಣ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೆ, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ನೆರೆ ಹಾಗೂ ಬರ ಪರಿಸ್ಥಿತಿಯಲ್ಲಿ ತಕ್ಷಣವೇ ಕ್ಷೇತ್ರಗಳಿಗೆ ಭೇಟಿ ನೀಡಿ ನೆರವಾಗಿದ್ದನ್ನು ಸ್ಮರಿಸಿದ ಅವರು, ಪ್ರಸ್ತುತ ಸಚಿವರು ತಕ್ಷಣ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕೆಂದು ಒತ್ತಾಯಿಸಿದರು.

Join WhatsApp

Join Now

Join Telegram

Join Now