Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈದ್ ಮಿಲಾದ್ ಗಲಾಟೆಯಾದ ಸ್ಥಳಕ್ಕೆ ಬಿಜೆಪಿ ಸತ್ಯಶೋಧನ ತಂಡ ಭೇಟಿ..!

---Advertisement---

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ಗಲಭೆ ನಡೆದಿದೆ. ಸದ್ಯಕ್ಕೆ ಶಿವಮೊಗ್ಗದಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದು ಪರಿಸ್ಥಿತಿ ಹತೋಟಿಯಲ್ಲಿದೆ. ಇಂದು ಗಲಾಟೆ ನಡೆದ ಸ್ಥಳಕ್ಕೆ ಬಿನೆಪಿಯ ಸತ್ಯ ಶೋಧನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಘಟನೆಯ ಸಂಪೂರ್ಣ ಮಾಹಿತಿ ಪಡೆಯಲಿದೆ.

 

ಸತ್ಯಶೋಧನಾ ತಂಡದಲ್ಲಿ ನಳೀನ್ ಕುಮಾರ್ ಕಟೀಲ್, ಈಶ್ಚರಪ್ಪ, ಅಶ್ವತ್ಥ್ ನಾರಾಯಣ್, ಆರಗ ಜ್ಞಾನೇಂದ್ರ, ಬಿವೈ ರಾಘವೇಂದ್ರ, ರವಿಕುಮಾರ್, ಶಾಸಕ ಚನ್ನಬಸಪ್ಪ ಸೇರಿದಂತೆ ಹಲವರು ಈ ತಂಡದಲ್ಲಿ ಇರಲಿದ್ದಾರೆ. ನೇರವಾಗಿ ಘಟನೆ ನಡೆದ ಸ್ಥಳಕ್ಕೆ ಹೋಗಿ, ಅಲ್ಲಿ ಪರಿಶೀಲನೆ ನಡೆಸಲಿದ್ದಾರೆ.

ಗಲಭೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೌಹಾರಿತ್ತು. ಅದರ ಮುಂದುವರೆದ ಭಾಗವೇ ಇಂದು ಸತ್ಯಶೋಧನೆ ಮಾಡಲು ಹೊರಟಿದೆ. ಅಲ್ಲಿ ಏನೆಲ್ಲಾ ಆಯ್ತು ಎಂಬ ಮಾಹಿತಿ ಕಲೆ ಹಾಕಲಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರದಂದು ಈದ್ ಮಿಲಾದ್ ಮೆರವಣಿಗೆ ನಡೆದಿತ್ತು. ಈ ವೇಳೆ ಬೀದಿ ಬೀದಿಯಲ್ಲಿ ತಲ್ವಾರ್ ಹಿಡಿದು ಪ್ರದರ್ಶನ ಮಾಡಲಾಗಿದೆ ಎನ್ನಲಾಗಿದೆ. ಈ ವೇಳೆ ಪಿಂಡರ ಗುಂಪು ಜನರ ಮೇಲೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು. ಜಿಲ್ಲೆಯಲ್ಲಿ ಈಗಲೂ 144 ಸೆಕ್ಷನ್ ಜಾರಿಯಲ್ಲಿದೆ‌. ಪೊಲೀಸರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment