ಉಡುಪಿ: ಬಿಜೆಪಿಯ ಹಿರಿಯ ಮುಖಂಡ ಎ ಜಿ ಕೊಡ್ಗಿ ಇಂದು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 93 ವರ್ಷದ ಕೊಡ್ಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಎರಡೂ ಬಾರಿ ಬೈಂದೂರು ಶಾಸಕರಾಗಿದ್ದರು. ಬಳಿಕ 1993 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ. ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು 8 ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು.
ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ಅವರು ತಿಳಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾಪನ್ನು ಮೂಡಿಸಿದ್ದ ಅವರು ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅವರ ನಿಧನದಿಂದ ಪಕ್ಷ ಹಾಗೂ ಸಮಾಜ ಒಬ್ಬ ಮಾರ್ಗದರ್ಶಕ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…