ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಬಿಜೆಪಿ.. ಸರಣಿ ಟ್ವೀಟ್ ಮೂಲಕ ವಾಗ್ದಾಳಿ..!

suddionenews
2 Min Read

 

 

ಬೆಂಗಳೂರು : ಇತ್ತಿಚೆಗೆ ರೌಡಿಶೀಟರ್ ಗಳೆಲ್ಲಾ ಬಿಜೆಪಿ ಸೇರುವುದಕ್ಕೆ ಕ್ಯೂ ನಿಂತಿದ್ದಾರೆ ಎಂಬ ಚರ್ಚೆ ಜೋರಾಗಿಯೇ ಶುರುವಾಗಿದೆ. ಈ ವಿಚಾರವನ್ನಿಟ್ಟುಕೊಂಡು ಕಾಂಗ್ರೆಸ್ ಸಾಕಷ್ಟು ವ್ಯಂಗ್ಯವಾಡಿತ್ತು. ಇದೀಗ ಬಿಜೆಪಿ ಅದೇ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದೆ.

ಕುಂಬಳಕಾಯಿ ಕಳ್ಳ ಅಂದರೆ ನೀವ್ಯಾಕೆ ಹೆಗಲು ಮುಟ್ಟಿಕೊಳ್ಳುತ್ತೀರಿ @MBPatil ರೇ? ಸಿದ್ರಾಮುಲ್ಲಾ, ಕೊತ್ವಾಲ್ ಶಿಷ್ಯ ಎಂಬುದೆಲ್ಲ ಜನ ಬಳಸುತ್ತಿರುವ ಪದಗಳು. ಅವರನ್ನೇ ಸಹಿಸಿಕೊಳ್ಳದ ನೀವು ರೌಡಿಯ ರೀತಿ ಬೆದರಿಕೆ ಒಡ್ಡುತ್ತಿದ್ದೀರಿ. ಎಷ್ಟೇ ಆದರೂ, ರೌಡಿಸಂ ಹಿನ್ನೆಲೆಯಿರುವ ಅಧ್ಯಕ್ಷರನ್ನು ಹೊಂದಿರುವ ಪಕ್ಷವಲ್ಲವೇ ನಿಮ್ಮದು?

ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?

26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ @siddaramaiah, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ? ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದನ್ನು ಒಪ್ಪದ @siddaramaiah, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್ ಬ್ರಾಂಡ್ ಮಾಡಿರುವುದು.

ಟಿಪ್ಪು ಎಕ್ಸ್ಪ್ರೆಸ್ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’ ಎಕ್ಸ್ಪ್ರೆಸ್ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ @siddaramaiah. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?

ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ @siddaramaiah ಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *