ಬಿಜೆಪಿ ಕುಟುಂಬ ರಾಜಕಾರಣದ ಬಗ್ಗೆ ಇನ್ಮುಂದೆ ಬಿಜೆಪಿ ಮಾತನಾಡಬಾರದು : ಆಯನೂರು ಮಂಜುನಾಥ್

suddionenews
1 Min Read

ವಿಧಾನಸಭಾ ಚುನಾವಣೆ ಕಳೆದು ಆರು ತಿಂಗಳ ಬಳಿಕ ಕಡೆಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇದಕ್ಕೆ ಬಿಜೆಪಿಯಲ್ಲಿಯೇ ಹಲವರು ಅಸಮಾಧಾನ ಕೂಡ ವ್ಯಕ್ತಪಡಿಸಿದ್ದಾರೆ. ಇದರ‌ ನಡುವೆ ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿದ್ದು, ಬಿಜೆಪಿ ಇನ್ಮುಂದೆ ಆದರೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದನ್ನು ಬಿಡಬೇಕು. ಬಿವೈ ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು ಎಂದಿದ್ದಾರೆ.

 

ಬಿಎಸ್ವೈ ಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹಳ ಸಂತಸದ ವಿಚಾರ. ಬಿಜೆಪಿಯಲ್ಲಿ ಇದೇ ಮೊದಲ ಬಾರಿಗೆ ಅತಿ ಸಣ್ಣ ವಯಸ್ಸಿನ ರಾಜ್ಯಾಧ್ಯಕ್ಷರ ನೇಮಕವಾಗಿರುವುದು. ಯಶಸ್ವಿಯಾಗಿ ಬಹಳ ಎಚ್ಚರದಿಂದ ಕೆಲಸ ಮಾಡಲಿ. ವಿಜಯೇಂದ್ರ ಇಡುವಂತ ಪ್ರತಿಯೊಂದು ಹೆಜ್ಜೆ ಯಡಿಯೂರಪ್ಪ ಅವರ ಮೇಲೆ ಪ್ರಭಾವ ಬೀರುತ್ತದೆ. ವಿಜಯೇಂದ್ರ ಅವರ ಹಿಂದೆ ಯಡಿಯೂರಪ್ಪ ಅವರ ಪ್ರಭಾವವಿದೆ. ಹೀಗಾಗಿ ಅವರ ಸಫಲತೆ ಹಾಗೂ ವಿಫಲತೆ ಎರಡೂ ಯಡಿಯೂರಪ್ಪ ಮೇಲೆ ಪ್ರಭಾವ ಬೀರುತ್ತದೆ.

 

ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತದೆ ಎಂದು ನಾನು ಹೇಳುವುದಿಲ್ಲ. ಯಡಿಯೂರಪ್ಪ ಅವರ ಸಂಪೂರ್ಣ ಶಕ್ತಿ ಬಳಸಿಕೊಳ್ಳಲು ಈ ರೀತಿ ಮಾಡಿದ್ದಾರೆ. ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ತೊಂದರೆಗಳಿಲ್ಲ. ಈಗಾಗಲೇ ಕಾಂಗ್ರೆಸ್ ತನ್ನ ಸಾಮರ್ಥ್ಯವನ್ನು ಪ್ರದರ್ಶನ ಮಾಡಿದೆ. ಬಿಜೆಪಿ ಈ ಆಯ್ಕೆಯಿಂದ ಅವರ ಆಂತರಿಕ ಕಲಹ, ಭ್ರಷ್ಟಾಚಾರ ಯಾವುದೂ ಕೂಡ ಮಾಯವಾಗುವುದಿಲ್ಲ. ಅವರ ಕೆಲಸಕ್ಕಾಗಿ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಂಡಿದ್ದಾರೆಯೇ ಹೊರತು ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *