Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಲಾಯರ್ ಮಾತಿನಲ್ಲೇ ಗೋಚರಿಸುತ್ತಿದೆ : ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ..!

Facebook
Twitter
Telegram
WhatsApp

ಬೆಂಗಳೂರು: ಸಮಸ್ಯೆಯನ್ನು ಜೀವಂತವಾಗಿಡಬೇಕು ಹಾಗೂ ಅದನ್ನು ನಿವಾರಿಸುವುದು ಕಾಂಗ್ರಸ್ಸೇ ಎಂಬ ಭ್ರಮೆ ಹುಟ್ಟಿಸಬೇಕು ಎಂಬುದು @INCKarnatakaದ ಮೂಲ ಮಂತ್ರ. ಇದಕ್ಕೆ ಸಂವಿಧಾನ, ನ್ಯಾಯಾಲಯವೇ ಅಡ್ಡಬಂದರೂ ಅದನ್ನು ದಾಟಿ ಹೋಗುತ್ತೇವೆ ಎಂಬುದು ಮಾಜಿ ಲಾಯರ್ @siddaramaiahನವರ ಮಾತಿನಲ್ಲಿ ಗೋಚರಿಸುತ್ತಿದೆ ಎಂದು ಟ್ವೀಟ್ ಮಾಡಿದೆ.

ಕಾಂಗ್ರೆಸ್ ಇಷ್ಟು ವರ್ಷ ದೇಶದಲ್ಲಿ ಗೆದ್ದಿದ್ದೇ ಕೋಮುವಾದ ಮತ್ತು ಬಡತನದ ಕಾರಣದಿಂದ. ಈಗ ಬಿಜೆಪಿ ಸರ್ಕಾರದಲ್ಲಿ ಕೋಮುವಾದಕ್ಕೂ ಆಸ್ಪದವಿಲ್ಲ. ಬಡತನ ನಿವಾರಣೆ ಕ್ರಮದ ಜತೆಗೆ ಅಭಿವೃದ್ಧಿಯನ್ನೂ ನಮ್ಮ ರಾಜ್ಯ ಕಾಣುತ್ತಿದೆ. ರಾಜ್ಯವೇ ರಾಮರಾಜ್ಯವಾದರೆ, @INCKarnataka ಎಂಬ ರಾವಣರಿಗೆ ಜನಮನ್ನಣೆ ಸಿಗುವುದೇ?

ಈಗ ಅದಷ್ಟೇ ಅಲ್ಲದೇ ಇನ್ನೇನು ಬರುವ ಮಾರ್ಚಿನಲ್ಲಿ ಬೆಂಗಳೂರು – ಹುಬ್ಬಳ್ಳಿ ನಡುವೆ #VandeBharatExpress ರೈಲು ಸಂಚರಿಸಲಿದೆ. ಇಷ್ಟೆಲ್ಲ ಅಭಿವೃದ್ಧಿ ಒಂದೇ ಸಲ ಬಿಜೆಪಿ ಸರ್ಕಾರದಿಂದಲೇ ಆಗಿಬಿಟ್ಟರೆ ಯಾವ ಮುಖ ಇಟ್ಟುಕೊಂಡು @INCKarnataka ಅಭ್ಯರ್ಥಿಗಳು ಮತಭಿಕ್ಷೆ ಕೇಳಲು ಹೋಗುವುದು ಹೇಳಿ?

ಈ @siddaramaiah ಅಬ್ಬರಿಸಿ ಬೊಬ್ಬಿರಿಯುವುದಕ್ಕೆ ಮತ್ತೊಂದು ಗುಪ್ತ ಕಾರಣವೇ, ಹುಬ್ಬಳ್ಳಿ – ಧಾರವಾಡದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬಾರದು ಎಂಬ ದುರುದ್ದೇಶ. ಏಕೆಂದರೆ @BSBommai ಸರ್ಕಾರ #BeyondBengaluru ಉಪಕ್ರಮದ #GlobalInvestorsMeet ವೇಳೆ ಹುಬ್ಬಳ್ಳಿ ಧಾರವಾಡಕ್ಕೆ ಭರಪೂರ ಹೂಡಿಕೆಗಳನ್ನು ತಂದಿದೆ.

ದೇವಸ್ಥಾನಗಳ ತೆರವಾದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದ @siddaramaiah, ದರ್ಗಾ ತೆರವಿನ ಬಗ್ಗೆ ಎಗರಿ ಬೀಳುತ್ತಿರುವುದೇಕೆ? ಮಾತೆತ್ತಿದರೆ ಸಂವಿಧಾನದ ಬಗ್ಗೆ ಪ್ರವಚನ ಕೊಡುವ ಸಿದ್ದರಾಮಯ್ಯನವರು ಈಗ ನ್ಯಾಯಾಲಯದ ಅದೇಶವನ್ನೇಕೆ ಪಾಲಿಸಲು ಜನರಿಗೆ ಹೇಳುತ್ತಿಲ್ಲ? ಇದೇನಾ ಇವರ ಜಾತ್ಯಾತೀತತೆ? ಸಂವಿಧಾನ ಪ್ರೇಮ?

ಈ ದರ್ಗಾ ಹುಬ್ಬಳ್ಳಿ – ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಕ್ಕದಲ್ಲಿತ್ತು. ರಸ್ತೆ ಅಗಲೀಕರಣಕ್ಕೆ ಭೈರಿದೇವರಕೊಪ್ಪದ ದರ್ಗಾ ತೆರವಿಗೆ ಹೈಕೋರ್ಟ್ ಆದೇಶ ನೀಡಿತ್ತು. ಇದಕ್ಕನುಸಾರವಾಗಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ತೆರವು ಕಾರ್ಯಾಚರಣೆಯಾಗಿದ್ದೇ ವಿನಾ @BSBommai ಸರ್ಕಾರದ ಆದೇಶದಿಂದಲ್ಲ.

ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿನ ದರ್ಗಾ ಸ್ಥಳಾಂತರದ ಬಗ್ಗೆ @siddaramaiah
ನವರು ಅಬ್ಬರಿಸಿ ಬೊಬ್ಬಿರಿದಿದ್ದೆಲ್ಲವೂ ಜನರನ್ನು ನಂಬಿಸಲು ಆಡುವ “ಪ್ರಜಾಪ್ರಭುತ್ವದ ನಾಟಕ”. ಏಕೆಂದರೆ ಅದೇ 13 ದೇವಸ್ಥಾನಗಳು ಮತ್ತು 1 ಚರ್ಚ್ ಹಾಗೂ 1 ದರ್ಗಾವನ್ನು ತೆರವುಗೊಳಿಸಲು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗುರುತಿಸಿದ್ದರು ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!