Connect with us

Hi, what are you looking for?

Home

ಜುಲೈ 24 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ : ರವಿಕುಮಾರ್

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.21): ಪಕ್ಷ ಸಂಘಟನೆ ಹಾಗೂ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಹೆಚ್ಚಿನ ಸ್ಥಾನ ಗಳಿಸಲು ರೂಪುರೇಷೆಗಳನ್ನು ಸಿದ್ದಪಡಿಸುವುದಕ್ಕಾಗಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಚಳ್ಳಕೆರೆ ಟೋಲ್‍ಗೇಟ್ ಸಮೀಪವಿರುವ ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ನಡೆಯಲಿದೆ ಎಂದು ಬಿಜೆಪಿ.ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ.ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟಿಸಲಿದ್ದು, ಹತ್ತು ವಿಭಾಗದ ಪ್ರಭಾರಿ, ಸಹ ಪ್ರಭಾರಿ, ಸಂಘಟನಾ ಕಾರ್ಯದರ್ಶಿ, ಸಹ ಸಂಘಟನಾ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರತಿ ತಿಂಗಳು ವಿಶೇಷವಾಗಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯುತ್ತದೆ. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ತಯಾರಿ ಹಾಗೂ ಯಾವ ಜಿಲ್ಲೆಗೆ ಯಾವ ಮಂತ್ರಿ, ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಬೇಕೆನ್ನುವುದರ ಕುರಿತು ಚರ್ಚೆಯಾಗಲಿದೆ ಎಂದು ಹೇಳಿದರು.

ಹಾನಗಲ್, ಸಿಂಧಗಿ ಉಪ ಚುನಾವಣೆ, ಡಿಸೆಂಬರ್‍ನಲ್ಲಿ 25 ವಿಧಾನಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆ ಸಂಬಂಧ ಸಭೆಯಲ್ಲಿ ಚರ್ಚೆಗೆ ಬರಲಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ.ಹೆಚ್ಚಿನ ಸ್ಥಾನಗಳಲ್ಲಿ ಗೆದ್ದಿದೆ. ಆ.1 ರಿಂದ 15 ರವರೆಗೆ ಬೂತ್ ಅಧ್ಯಕ್ಷರ ಸಮಾವೇಶ, ಪ್ರತಿ ಬೂತ್ ಎ ಬೂತ್ ಆಗಬೇಕೆಂಬುದು ನಮ್ಮ ಉದ್ದೇಶ. ಎ ಬೂತ್ ಎಂದರೆ ಬಿಜೆಪಿ ಹೆಚ್ಚಿನ ಮತ ಪಡೆಯುವುದು ಎಂದರ್ಥ.
ಬಿ.ಬೂತ್ ಅಂದರೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ.ಗೆ ಮತ ಬೀಳಬಹುದು.

ರಾಜ್ಯಾದ್ಯಂತ ಬೂತ್ ಅಭಿಯಾನ ನಡೆಸಲಾಗುವುದು. ಆ.16 ರಿಂದ 30 ರವರೆಗೆ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಸಲಾಗುವುದು. ಇದೇ ತಿಂಗಳ 25 ರಂದು ಪ್ರಧಾನಿ ನರೇಂದ್ರಮೋದಿರವರ ಮನ್‍ಬಾತ್ ಭಾಷಣವನ್ನು ಆಲಿಸಲು ಬೂತ್ ಅಧ್ಯಕ್ಷರುಗಳ ಮನೆ, ಕಲ್ಯಾಣ ಮಂಟಪ ಇಲ್ಲವೇ ಸಮುದಾಯ ಭವನಗಳಲ್ಲಿ ವ್ಯವಸ್ಥೆ ಮಾಡಬೇಕು.

ಇದರ ಹೊಣೆಯನ್ನು ಬೂತ್ ಅಧ್ಯಕ್ಷರುಗಳಿಗೆ ವಹಿಸಲಾಗಿದೆ ಎಂದರು. ಕನಿಷ್ಟ ಮೂವತ್ತು ಸಾವಿರ ಬೂತ್‍ನಲ್ಲಾದರೂ ಈ ವ್ಯವಸ್ಥೆಯಾಗಬೇಕೆಂದರು.
ಸೆ.1 ರಿಂದ 15 ರವರೆಗೆ ಗ್ರಾಮ ಪಂಚಾಯಿತಿ ಸದಸ್ಯರ ಜಿಲ್ಲಾ ಸಮಾವೇಶ, ಅಕ್ಟೋಬರ್‍ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ರಾಜ್ಯ ಮಟ್ಟದ ಸಮಾವೇಶ ನಡೆಸಲಾಗುವುದು.

ಕಳೆದ ಬಾರಿಯ ಎಂ.ಎಲ್.ಸಿ.ಚುನಾವಣೆಯಲ್ಲಿ ಏಳು ಸೀಟುಗಳನ್ನು ಪಡೆದಿದ್ದೆವು. ಈ ಸಾರಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕೆಂಬುದು ನಮ್ಮ ಮುಂದಿರುವ ಗುರಿ. ಪಕ್ಷ ಕಟ್ಟಲು ಹಾಗೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ.ಹೆಚ್ಚಿನ ಸ್ಥಾನಗಳನ್ನು ಪಡೆಯುವ ಕುರಿತು ರಾಜ್ಯ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‍ಸಿದ್ದಾಪುರ, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಯುವ ಮೋರ್ಚ ಜಿಲ್ಲಾಧ್ಯಕ್ಷ ಹನುಮಂತೆಗೌಡ ಪತ್ರಿಕಾಗೋಷ್ಟಿಯಲ್ಲಿದ್ದರು.

 

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!