ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ: ಸಿ.ಸಿ.ಪಾಟೀಲ್

suddionenews
1 Min Read

ಬೆಂಗಳೂರು: ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಪಕ್ಷ ನಿರ್ಧರಿಸಲಿದೆ. ಪಕ್ಷ ನಿರ್ಧರಿಸಿದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಮಾಡಲಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಸೂಚನೆ ಮೇರೆಗೆ ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಟ್ಟಿದ್ದೇನೆ. ರಾಜ್ಯದಲ್ಲಿ 2017ರಿಂದ ಸತತ ಪ್ರವಾಹ ಕಾಡುತ್ತಿದೆ. ಲಭ್ಯ ಹಣಕಾಸಿನ ಇತಿಮಿತಿಯಲ್ಲಿ ರಸ್ತೆಗಳ ಗುಂಡಿ ಮುಚ್ಚಲು ಆದೇಶಿಸಲಾಗಿದೆ.
ಅನುದಾನ ಬಿಡುಗಡೆ ಬಗ್ಗೆ ಮುಖ್ಯಮಂತ್ರಿಗಳನ್ನು ಕೋರಿದ್ದು, ಹೆಚ್ಚಿನ ಅನುದಾನದ ಭರವಸೆಯಲ್ಲಿದ್ದೇವೆ. ಹೊಸ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದೇವೆ. ಕುಸಿದ ಸೇತುವೆಗಳ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಕಳಪೆ ರಸ್ತೆ ಕಾಮಗಾರಿ ನಡೆದರೆ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *