ಸುಳ್ಳುಗಳ ಹೊರತಾಗಿ‌ ನಿಮ್ಮ ರಾಜಕೀಯ ನಡೆಯೋದಿಲ್ವಾ..? : ಬಿಜೆಪಿ ಟ್ವೀಟ್..!

suddionenews
1 Min Read

ಹಿಜಾಬ್ ಕುರಿತು ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನ ಎಳೆತಂದಿದ್ದಾರೆ. ಬಿಜೆಪಿ ಸಿದ್ದರಾಮಯ್ಯ ಅವರ ಕುರಿತು ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ. ಹಿಜಾಬ್‌ಗೆ ಎಲ್ಲಿ ವಿರೋಧ ವ್ಯಕ್ತವಾಗಿದೆ ಎನ್ನುವುದರ ಬಗ್ಗೆಯೇ @siddaramaiah ಅವರಿಗೆ ಗೊಂದಲವಿದೆ. ಹಾದಿಬೀದಿಯಲ್ಲಿ, ಕಾಲೇಜಿನ ಆವರಣದಲ್ಲಿ ಹಿಜಾಬ್‌ ನಿಷೇಧಿಸಿಲ್ಲ. ವಸ್ತ್ರಸಂಹಿತೆಯ ಪ್ರಕಾರ ತರಗತಿಯಲ್ಲಿ ಅವಕಾಶ ನೀಡಿಲ್ಲ. ಹಿಜಾಬ್‌ ಒಳಗೆ ಅಡಗಿರುವ ʼಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ನೀವು ಅದೆಲ್ಲವನ್ನೂ ದಾಟಿ ಸಾಗುತ್ತಿದ್ದೀರಿ. ಮೊದಲನೆಯದಾಗಿ ಹಿಜಾಬ್‌, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸವನ್ನು ಮೊದಲು ಅರಿತುಕೊಳ್ಳಿ. ಹಿಜಾಬ್‌ ನಿಷೇಧಿಸಿಲ್ಲ, ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನಿರಾಕರಿಸಲಾಗಿದೆ, ಅಷ್ಟೇ.

ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ?. ಹಿಜಾಬ್‌ ವಿಚಾರದಲ್ಲಿ ಹಿಜಾಬ್‌ ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದರು, ನ್ಯಾಯಾಲಯ ಇವರ ಹೇಳಿಕೆಗೆ ವಿರುದ್ಧವಾದ ತೀರ್ಪು ನೀಡಿತು. ರಾಷ್ಟ್ರಧ್ವಜವೇ ಇರದ ಸ್ಥಂಭದಲ್ಲಿ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂಬ ಸುಳ್ಳು ಹೇಳಿದರು ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *