Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.05 : ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟಿ ಗ್ಯಾರೆಂಟಿಗಳನ್ನು ಘೋಷಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‍ನಿಂದ ಯಾವುದೇ ಅಭಿವೃದ್ದಿಯಾಗಿಲ್ಲ ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಟೀಕಿಸಿದರು.

ಭಾರತೀಯ ಜನತಾಪಾರ್ಟಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ಮಂಡಲದ ಗ್ರಾಮ ಚಲೋ ಅಭಿಯಾನವನ್ನು ರೆಡ್ಡಿ ಸಮುದಾಯ ಭವನದಲ್ಲಿ ಉದ್ಗಾಟಿಸಿ ಮಾತನಾಡಿದರು.

ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾಲ್ಕು ನೂರಕ್ಕು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಕರ್ನಾಟಕದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿಗೆ ಬೆಂಬಲಿಸುತ್ತಿರುವುದರಿಂದ ಮೈಸೂರು ಹಳೆ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬಂದಂತಾಗಿದೆ.

ರಾಜ್ಯವನ್ನು ಅಭಿವೃದ್ದಿ ಕಡೆ ಕೊಂಡೊಯ್ಯದ ಕಾಂಗ್ರೆಸ್ ಸರ್ಕಾರ ವಸೂಲಿಯಲ್ಲಿ ತೊಡಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಮೋದಿ ಗೆಲ್ಲದಿದ್ದರೆ ಭಾರತಕ್ಕಷ್ಟೆ ಅಲ್ಲ ಇಡೀ ಪ್ರಪಂಚಕ್ಕೆ ಹಿನ್ನೆಡೆಯಾಗಲಿದೆ. ಅನೇಕ ಕಾರ್ಯಕ್ರಮಗಳನ್ನು ಬಿಜೆಪಿ ಕೊಟ್ಟಿದೆ. ಅವುಗಳನ್ನೆಲ್ಲಾ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಮುಟ್ಟಿಸಬೇಕೆಂದು ತಿಳಿಸಿದರು.

ಬ್ರಿಟೀಷರ ವಿರುದ್ದ ಹೋರಾಡಲು ಸಂಘಟನೆಯಾಗಿ ಹುಟ್ಟಿಕೊಂಡ ಕಾಂಗ್ರೆಸ್ ನಂತರ ರಾಜಕೀಯ ಪಕ್ಷವಾಗಿ ಬೆಳೆಯಿತು. ಸ್ವಾತಂತ್ರ್ಯದ ನಂತರ ಕಾಂಗ್ರೆಸ್‍ನ್ನು ವಿಸರ್ಜಿಸುವಂತೆ ಗಾಂಧಿ ಹೇಳಿದ್ದರು. ಆದರೆ ನೆಹರು ರಾಜಕೀಯ ಪಕ್ಷವಾಗಿ ಕಟ್ಟಿಕೊಂಡರು. ದೇಶದ ಪ್ರಧಾನಿ ನರೇಂದ್ರಮೋದಿರವರು 80 ಕೋಟಿ ಜನರಿಗೆ ಉಚಿತ ಅಕ್ಕಿ ಕೊಡುತ್ತಿದ್ದಾರೆ. ಪುಕ್ಕಟೆ ಆಸೆಗಳನ್ನು ಹುಟ್ಟಿಸಿ ಓಟು ತೆಗೆದುಕೊಳ್ಳುವುದು ಕಾಂಗ್ರೆಸ್ ಜಾಯಮಾನ. ಆರ್ಥಿಕ ವ್ಯವಸ್ಥೆಯಲ್ಲಿ ಭಾರತ ಐದನೇ ಸ್ಥಾನದಲ್ಲಿರುವುದನ್ನು ಕಂಡು ನಮ್ಮ ದೇಶ ಗಟ್ಟಿಯಾಗಿದೆ ಎಂದು ವಿರೋಧಿ ಚೈನಾ ಹೇಳುತ್ತಿದೆ. ಮತ ಕೇಳಲು ಹಿಂಜರಿಕೆ ಬೇಡ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎಸ್.ಲಿಂಗಮೂರ್ತಿ ಮಾತನಾಡಿ ಹತ್ತು ವರ್ಷಗಳಲ್ಲಿ ನಮ್ಮ ದೇಶದ ಪ್ರಧಾನಿರವರ ಸಾಧನೆಯನ್ನು ಪ್ರತಿ ಗ್ರಾಮಗಳಲ್ಲಿ ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು, ಪ್ರಮುಖರು, ಬೂತ್ ಸಂಚಾಲಕರು ಮಾಡಬೇಕಿದೆ. ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ದೇಶ ಇಬ್ಭಾಗ ಮಾಡುವ ಮಾತುಗಳನ್ನಾಡುತ್ತಿದ್ದಾರೆ. ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಉದ್ಘಾಟಿಸಿರುವ ಪ್ರಧಾನಿ ಮೋದಿರವರು ಐದು ನೂರು ವರ್ಷಗಳ ಭಾರತೀಯರ ಕನಸನ್ನು ನನಸುಗೊಳಿಸಿ ಸನಾತನ ಧರ್ಮ ಎತ್ತಿಹಿಡಿದಿದ್ದಾರೆಂದು ಹೇಳಿದರು.

ಸಾಮಾಜಿಕ, ಭೌಗೋಳಿಕ, ಆಹಾರ ಭದ್ರತೆ, ಮಹಿಳಾ ಸಬಲೀಕರಣದ ಕುರಿತು ಕೇಂದ್ರ ಸರ್ಕಾರ ಹಾಕಿಕೊಂಡಿರುವ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಿ. ಚುನಾವಣೆಯ ಸೋಲು-ಗೆಲುವಿನ ನಡುವೆ ದೇಶ ಗೆಲ್ಲಬೇಕು ಎಂದು ಕಾರ್ಯಕರ್ತರಲ್ಲಿ ವಿನಂತಿಸಿದರು.

ಗ್ರಾಮ ಚಲೋ ಅಭಿಯಾನದ ಜಿಲ್ಲಾ ಸಂಚಾಲಕ ಡಾ.ಸಿದ್ದಾರ್ಥ ಮಾತನಾಡುತ್ತ ಲೋಕಸಭೆ ಚುನಾವಣೆಯನ್ನು ಎದುರಿಸಬೇಕಾಗಿರುವುದರಿಂದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಪ್ರಧಾನಿ ಮೋದಿರವರು ಹತ್ತು ವರ್ಷಗಳಲ್ಲಿ ಮಾಡಿರುವ ಸಾಧನೆಯನ್ನು ತಿಳಿಸಬೇಕು. ವಿರೋಧ ಪಕ್ಷದವರು ಸುಳ್ಳು ಭರವಸೆಗಳನ್ನು ಜನತೆಗೆ ಮುಟ್ಟಿಸಿ. ನಮ್ಮ ಪಕ್ಷದ ಸಾಧನೆಗಳನ್ನು ಹೇಳಬೇಕಿದೆ. ಸುಳ್ಳು ಗ್ಯಾರೆಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿರುವವರನ್ನು ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲಿಸಬೇಕಾಗಿರುವುದರಿಂದ ಮೋದಿರವರ ಗ್ಯಾರೆಂಟಿಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗೋಣ ಎಂದು ತಿಳಿಸಿದರು.

ಪ್ರತಿ ಬೂತ್‍ನಲ್ಲಿ ಶೇ.60 ರಷ್ಟು ಮತಗಳನ್ನು ತೆಗೆದುಕೊಳ್ಳಬೇಕು. ಇಬ್ಬರು ಕಾರ್ಯಕರ್ತರನ್ನು ಪ್ರತಿ ಬೂತ್‍ಗೆ ನೇಮಕ ಮಾಡಲಾಗಿದೆ. ದಿನದ 24 ಗಂಟೆಯ ಸಮಯವನ್ನು ಬೂತ್‍ಗೆ ಕೊಟ್ಟು ಈಗಿನಿಂದಲೆ ಚುನಾವಣೆಗೆ ಸನ್ನದ್ದರಾಗಬೇಕೆಂದು ಕಿವಿಮಾತು ಹೇಳಿದರು.
ವಾಟ್ಸಪ್ ಗ್ರೂಪ್ ಮಾಡಿಕೊಳ್ಳಿ. ಪ್ರಧಾನಿ ಮೋದಿರವರ ಮನ್‍ಕಿಬಾತ್ ಕಾರ್ಯಕ್ರಮವನ್ನು ಎಲ್ಲರೂ ಆಲಿಸಿ. ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರಮೋದಿರವರನ್ನು ಪ್ರಧಾನಿಯನ್ನಾಗಿ ಮಾಡಿ ದೇಶ ಸೇವೆ ಮಾಡೋಣ. ಅದ್ಕಕಾಗಿ ಕೇಂದ್ರದ ಯೋಜನೆಗಳು ಎಲ್ಲರಿಗೂ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.

ಗ್ರಾಮ ಚಲೋ ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ನರೇಂದ್ರಮೋದಿರವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಕಾರ್ಯಕರ್ತರು ಏಕಚಿತ್ತದಿಂದ ಕೆಲಸ ಮಾಡಬೇಕು. ಅಟಲ್ ಬಿಹಾರಿ ವಾಜಪೇಯಿರವರು ದೇಶದ ಪ್ರಧಾನಿಯಾಗಿದ್ದಾಗ ಪ್ರತಿ ಗ್ರಾಮದ ರಸ್ತೆಗಳು ಮುಖ್ಯ ರಸ್ತೆಗೆ ಕೂಡುವಂತಾಗಲಿ ಎನ್ನುವ ಉದ್ದೇಶದಿಂದ ಗ್ರಾಮ ಸಡಕ್ ಯೋಜನೆಯನ್ನು ಜಾರಿಗೆ ತಂದರು. ಸರ್ವ ಶಿಕ್ಷ ಅಭಿಯಾನ, ಚತುಷ್ಪಥ ರಸ್ತೆ ಅವರ ಕಾಲದ್ದು, ಐದು ನೂರು ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

293 ಬೂತ್‍ಗಳಿವೆ ಪ್ರತಿ ಕಾರ್ಯಕರ್ತರು ಪಕ್ಕದ ಗ್ರಾಮಗಳಿಗೆ ಹೋಗಬೇಕು. ಪ್ರವಾಸಿ ಕಾರ್ಯಕರ್ತರು 24 ಗಂಟೆ ಗ್ರಾಮದಲ್ಲಿರಬೇಕು. ಹದಿನೈದು ದಿನಕ್ಕೊಮ್ಮೆ ಸಭೆ ನಡೆಸಿ. ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಹಾಗೂ ಹುಬ್ಬಳ್ಳಿಯಲ್ಲಿ ಶ್ರೀಕಾಂತ ಪೂಜಾರಿ ಬಂಧನ ಇವುಗಳೆಲ್ಲವನ್ನು ಜನತೆಯ ಮುಂದಿಡಬೇಕು. ದೇಶ ಕಟ್ಟುವ ಕೆಲಸ ಮಾಡಿದಾಗ ಸಮೃದ್ದ ಭಾರತ ನಿರ್ಮಾಣವಾಗಲಿದೆ ಎಂದರು.

ಬಿಜೆಪಿ  ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಗ್ರಾಮ ಚಲೋ ಅಭಿಯಾನದ ಸಹ ಸಂಚಾಲಕ ಶಿವಣ್ಣ, ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್, ಸುರೇಶ್, ಬಿಜೆಪಿ. ಮಹಿಳಾಧ್ಯಕ್ಷೆ ಶೈಲಜಾರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದ್, ವೀಣ, ಶೀಲ, ಭಾರ್ಗವಿ ದ್ರಾವಿಡ್, ತಿಮ್ಮಣ್ಣ, ರವಿಕುಮಾರ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!