ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ‘ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ಕಾರಣ’ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಮಾಡಿದ್ದ ಆಡಿಯೋದಲ್ಲಿ, ನಾನು ಹಿಂದೂ ಹುಲಿಯಾಗಿದ್ದೇನೆ. ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಡಾ. ಶರಣ ಪ್ರಕಾಶ್ ಹಿಂದೂ ಧರ್ಮದ ಬಗ್ಗೆ ಮಾತನಾಡಬಾರದು. ಮಾತನಾಡಿದರೆ ಇವರಿಗೆ ಬೆಂಕಿ ಬೀಳುತ್ತದೆ ಎಂದು ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಕಾಂಗ್ರೆಸ್ ನವರ ಹೆಸರನ್ನು ಹೇಳಿರುವುದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ.
ಈ ಸಂಬಂಧ ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ, ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸವಾಗುತ್ತಿದೆ. ಶಿವಕುಮಾರ್ ತನ್ನ ಸಾವಿಗೆ ಕಾರಣವಾದವರ ಬಗ್ಗೆಯೂ ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿಯಾಗಿರುವ ಪ್ರಿಯಾಂಗ್ ಖರ್ಗೆ ಒಂದು ಮಾತು ಆಡುತ್ತಿಲ್ಲ. ಈ ಸಾವಿನ ನೈತಿಕ ಹೊಣೆಹೊತ್ತು, ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










