ಬೆಂಗಳೂರು; ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ವಾಟ್ಸ್ ಆಪ್, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲವೂ ಸತ್ಯ ಅಲ್ಲ. ಅದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟಂತೆ ಡಿಸಿಪಿ ಈ ಪ್ರಕರಣದ ತನಿಖೆ ಮಾಡ್ತಾರೆ. ಯಾರದ್ದಾರೂ ಪ್ರಭಾವ ಇದ್ದರೆ ಪರಿಶೀಲನೆ ಮಾಡ್ತೀವಿ. ವರದಿ ಆಧರಿಸಿ ಏನು ಕ್ರಮ ತೆಗೆದುಕೊಳ್ಳಬೇಕು ತಗೊಳ್ತೀವಿ ಎಂದಿದ್ದಾರೆ.

ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ವಿನಯ್ ಸೋಮಯ್ಯ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಗೋಣಿಮರೂರು ನಿವಾಸಿ. ಇಂದು ಬೆಳಗ್ಗೆ 4.30ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಡೆತ್ ನೋಟ್ ಬರೆದಿದ್ದು, ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡನ ಹೆಸರನ್ನ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಮೃತ ವಿನಯ್ ಕೊಡಗು ಜಿಲ್ಲೆಯ ಸಮಸ್ಯೆ, ಸಮಹೆ ಸೂಚನೆಗಾಗಿ ವಾಟ್ಸಪ್ ಗ್ರೂಪ್ ಒಂದನ್ನ ಮಾಡಿಕೊಂಡಿದ್ದರು. ಈ ಗ್ರೂಪ್ ಮೂಲಕ ಕಾಂಗ್ರೆಸ್ ಶಾಸಕ ಪೊನ್ನಣ್ಣ ತೇಜೋವಧರಯ ಆರೋಪ ಹೊತ್ತಿದ್ದರು.

ಈ ಬಗ್ಗೆ ಕೊಡಗಿನಲ್ಲಿ ರಾಜಕೀಯ ಪ್ರೇರಿತ ಪ್ರಕರಣದಲ್ಲಿ FIR ದಾಖಲಾಗಿತ್ತು. ಗ್ರೂಪ್ ನಲ್ಲಿ ಯಾರೋ ಹಾಕಿದ್ದ ಮೆಸೇಜ್ ಗೆ ಎಫ್ಐಆರ್ ದಾಖಲಾಗಿತ್ತು. ಮಡಿಕೇರಿ ನಗರದ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ದೂರು ನೀಡಿದ್ದರು. ಅದರಂತೆ ಕೆಲವು ದಿನಗಳ ಹಿಂದೆ ವಿನಯ್ ಬಂಧನಕ್ಕೆ ಒಳಗಾಗಿ ಜಾಮೀನು ಪಡೆದು ಹೊರ ಬಂದಿದ್ದರು. ಇದೀಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

