Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈನಮುನಿಯ ಹತ್ಯೆ ಸಂಬಂಧ ಬಿಜೆಪಿ ಧರಣಿಗೆ ನಿರ್ಧಾರ : ಗೃಹ ಸಚಿವರು ಹೇಳಿದ್ದೇನು..?

---Advertisement---

 

ಬೆಂಗಳೂರು: ಜೈನಮುನಿಯ ಹತ್ಯೆ ಸಂಬಂಧ ಸೂಕ್ತ ತನಿಖೆ‌ ನಡೆಸಬೇಕು ಎಂದು ಒತ್ತಾಯಿಸಲು ಬಿಜೆಪಿ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲ ರಾಜ್ಯದ ಹಲವೆಡೆ ಈಗಾಗಲೇ ನ್ಯಾಯಕ್ಕಾಗಿ‌ ಪ್ರತಿಭಟನೆ ನಡೆಯುತ್ತಿವೆ. ಇಂದು ಬಿಜೆಪಿ ಕೂಡ ಸದನದ ಒಳಗೂ, ಹೊರಗು ಧರಣಿ ಕೂರಲು ನಿರ್ಧರಿಸಿದ್ದಾರೆ. ಜೊತೆಗೆ ಅಕ್ರಮ ವರ್ಗಾವಣೆ ದಂಧೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಹೇಳುತ್ತಿದ್ದ ಪೆನ್ ಡ್ರೈವ್ ವಿಚಾರಕ್ಕೂ ಧರಣಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

 

ರಾಜ್ಯ ಸರ್ಕಾರ ಪ್ರಮುಖ ಆರೋಪಿಯ ಹೆಸರನ್ನ ಮರೆಮಾಚುತ್ತಿದೆ. ಪಾರದರ್ಶಕವಾಗಿ ತನಿಖೆ ನಡೆಸಿ ಎಂಬುದು ಬಿಜೆಪಿಯ ನಿರ್ಣಯ. ಹೀಗಾಗಿ ಒಳಗೂ ಮತ್ತು ಹೊರಗೂ ಪ್ರತಿಭಟನೆ ನಡೆಸಲು ಮುಂದಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಈ ರೀತಿಯ ಘಟನೆ ನಡೆದಾಗ ತಾರತಮ್ಯ ಯಾರು ಮಾಡಲ್ಲ. ಯಾರು ಅಪರಾಧಿಗಳಿದ್ದಾರೆ ತಕ್ಷಣ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಘಟನೆ ಆದ ಮೇಲೆ ಪೊಲೀಸರಿಗೆ ವಿಚಾರ ಗೊತ್ತಾದ ಕೂಡಲೆ ಪೊಲೀಸರು ಅಲರ್ಟ್ ಆಗಿದ್ದಾರೆ. ಆ ಮೃತದೇಹ ತೆಗೆಸಿ, ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಪಕ್ಷಾತೀತವಾಗಿ ಕೆಲಸ ಮಾಡಿದ್ದಾರೆ. ಕಾನೂನಿನ ಬಗ್ಗೆ ನಂಬಿಕೆ ಇಡಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...