ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ನಾಯಕರು ವಲಸೆ ಹೋಗ್ತಾರೆ ಅನ್ನೋದೇ ಬಾರೀ ಚರ್ಚೆವೆ ಗ್ರಾಸವಾಗಿದೆ. ಅದರಲ್ಲೂ ಬಿಜೆಪಿಗೆ ಬಂದು ಘಟಾನುಘಟಿ ಎನಿಸಿಕೊಂಡವರು ಮರಳುತ್ತಾರೆ ಎಂಬುದೇ ಬಿಜೆಪಿಗೆ ಹೆಚ್ಚಿನ ತಲೆನೋವಾಗಿದೆ. ಇರುವ ನಾಯಕರನ್ನು ಉಳಿಸಿಕೊಳ್ಳಲು ಬಿಜೆಪಿ ಕೂಡ ಸಾಕಷ್ಟು ಪ್ರಯತ್ನ ಪಡ್ತಾ ಇದೆ. ಅದರಲ್ಲೂ ಎಸ್ ಟಿ ಸೋಮಶೇಖರ್ ಅವರನ್ನ ತಮ್ಮ ಪಕ್ಷದಲ್ಲಿಯೇ ಉಳಿಸಿಕೊಳ್ಳಲು, ಅಸಮಾಧಾನ ಹೊರಹಾಕಿದ್ದಂತವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದರ ಬೆನ್ನಲ್ಲೆ ಮತ್ತೊಂದು ಶಾಕಿಂಗ್ ಬೆಳವಣಿಗೆ ನಡೆದಿದೆ. ಎಸ್ ಟಿ ಸೋಮಶೇಖರ್, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಂದಿದ್ದಾರೆ.
ಎಸ್ ಟಿ ಸೋಮಶೆಖರ್ ಇಂದು ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ನಡೆಸಿದ್ದಾರೆ. ಅದು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ. ಈ ದಿಡೀರ್ ಭೇಟಿ ಹಾಗೂ ಚರ್ಚೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಮುನ್ಸೂಚನೆಯ ಇದು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.
ಎಸ್ ಟಿ ಸೋಮಶೇಖರ್ ಸದ್ಯ ತಮ್ಮ ಕ್ಷೇತ್ರದ ಸಮಸ್ಯೆ, ಅಭಿವೃದ್ಧಿಗಳ ಬಗ್ಗೆ ಸಿಎಂ ಬಳಿ ಚರ್ಚಿಸಿದ್ದಾರೆ. ಅದರ ಜೊತೆಗೆ ಪ್ರಸ್ತುತ ರಾಜಕೀಯದ ವಿಚಾರವನ್ನು ಚರ್ಚಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಆಪರೇಷನ್ ಹಸ್ತದ ಆರೋಪಗಳು ಕೇಳಿ ಬಂದಿವೆ. ಕಾಂಗ್ರೆಸ್ ನವರು ಲೋಕಸಭಾ ಚುಮಾವಣೆಯಲ್ಲಿ ಗೆಲ್ಲುವುದಕ್ಕೆ ನಮ್ಮವರನ್ನು ಸೆಳೆಯುತ್ತಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿದೆ. ಇದರ ನಡುವೆಯೇ ಇಂತಹ ಬೆಳವಣಿಗೆಗಳು ನಡೆಯುತ್ತಿವೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…