ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಬಿಜೆಪಿ ವಿಪಕ್ಷ ಸ್ಥಾನದಲ್ಲಿ ನಿಂತಿದೆ. ಆದ್ರೆ ಇನ್ನು ಕೂಡ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಬಿಜೆಪಿ ಆ ಕಡೆ ಹೆಚ್ಚು ಗಮನ ಕೂಡ ಹರಿಸಿಲ್ಲ. ಕಾಂಗ್ರೆಸ್ ನಾಯಕರು ಸಾಕಷ್ಟು ಸಲ ವ್ಯಂಗ್ಯ ಮಾಡಿದೆ. ಮೊದಲು ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದು. ಆದರೆ ಇನ್ನೂ ಆಯ್ಕೆಯಾಗಿಲ್ಲ. ಇದರ ಜೊತೆಗೆ ಇದೀಗ ಮಾಜಿ ಪ್ರಧಾನಿ ದೇವೇಗೌಡ ಅವರು, ಬಿಜೆಪಿ ವಿಚಾರಕ್ಕೆ ಬೆಂಬಲ ಸೂಚಿಸಿ ಆಶ್ಚರ್ಯ ತಂದಿದ್ದಾರೆ.
ಬಿಜೆಪಿಯಲ್ಲಿ ಸದ್ಯ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನ ಕೂಡ ಖಾಲಿ ಇದೆ. ಹೀಗಾಗಿ ಎರಡು ಸ್ಥಾನಗಳನ್ನು ಬಿಜೆಪಿ ತುಂಬಬೇಕಿದೆ. ಈ ಎರಡು ಸ್ಥಾನವನ್ನು ಬಿಜೆಪಿ ತುಂಬಲೇಬೇಕಿದೆ. ಈ ಎರಡು ಸ್ಥಾನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೆಸರನ್ನು ಸೂಚಿಸಿದ್ದಾರೆ.
ಇಂದು ಸುದ್ದಿಗೋಷ್ಟಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಮಾಜಿ ಶಾಸಕ ಸಿಟಿ ರವಿ ಹಾಗೂ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿಚಾರವಾಗಿ ಚರ್ಚೆ ನಡೆದಿದೆ. ಆದ್ರೆ ಅದು ಇನ್ನೂ ಅಂತಿಮಗೊಂಡಿಲ್ಲ. ಆಡಳಿತರೂಢ ಕಾಂಗ್ರೆಸ್ ಸರ್ಕಾರ ತಮ್ಮ ವಿರುದ್ಧ ಯಾವುದೇ ಟೀಕೆಗಳಿಗೆ ಬಿಜೆಪಿಯವರಿಗೆ ನಿಮ್ಮಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯೇ ಆಗಿಲ್ಲ. ಮೊದಲು ಅದು ಮಾಡಿ ಎಂದು ಕೌಂಟರ್ ಕೊಡುತ್ತಲೇ ಬಂದಿತ್ತು. ಹೀಗಾಗಿ ಈ ಬಗ್ಗೆ ಚರ್ಚೆ ಇನ್ನು ಇದ್ದೇ ಇದೆ.
ಅವರ ಪಕ್ಷದಲ್ಲಿ ಏನು ನಡೆಯುತ್ತಿದೆ ಅನ್ನೋದು ನಮಗೆ ಬೇಕಿಲ್ಲ. ನಾವೂ ಯಾರ ಜೊತೆಗೂ ಕೈ ಜೋಡಿಸುವುದಿಲ್ಲ. ಲೋಕಸಭಾ ಚುನಾವಣೆಗೆ ನಾವೂ ಯಾರೊಂದಿಗೂ ಕೈಜೋಡಿಸಿಲ್ಲ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವೂ ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.