Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಹೆಸರಿಸಿ ಅಚ್ಚರಿ ಮೂಡಿಸಿದ ಹೆಚ್.ಡಿ. ದೇವೇಗೌಡ

---Advertisement---

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಬಿಜೆಪಿ ವಿಪಕ್ಷ ಸ್ಥಾನದಲ್ಲಿ ನಿಂತಿದೆ. ಆದ್ರೆ ಇನ್ನು ಕೂಡ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಬಿಜೆಪಿ ಆ ಕಡೆ ಹೆಚ್ಚು ಗಮನ ಕೂಡ ಹರಿಸಿಲ್ಲ. ಕಾಂಗ್ರೆಸ್ ನಾಯಕರು ಸಾಕಷ್ಟು ಸಲ ವ್ಯಂಗ್ಯ ಮಾಡಿದೆ. ಮೊದಲು ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದು. ಆದರೆ ಇನ್ನೂ ಆಯ್ಕೆಯಾಗಿಲ್ಲ. ಇದರ ಜೊತೆಗೆ ಇದೀಗ ಮಾಜಿ ಪ್ರಧಾನಿ ದೇವೇಗೌಡ ಅವರು, ಬಿಜೆಪಿ ವಿಚಾರಕ್ಕೆ ಬೆಂಬಲ ಸೂಚಿಸಿ ಆಶ್ಚರ್ಯ ತಂದಿದ್ದಾರೆ.

ಬಿಜೆಪಿಯಲ್ಲಿ ಸದ್ಯ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನ ಕೂಡ ಖಾಲಿ ಇದೆ. ಹೀಗಾಗಿ ಎರಡು ಸ್ಥಾನಗಳನ್ನು ಬಿಜೆಪಿ ತುಂಬಬೇಕಿದೆ. ಈ ಎರಡು ಸ್ಥಾನವನ್ನು ಬಿಜೆಪಿ ತುಂಬಲೇಬೇಕಿದೆ. ಈ ಎರಡು ಸ್ಥಾನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ‌ ದೇವೇಗೌಡ ಅವರು ಹೆಸರನ್ನು ಸೂಚಿಸಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಮಾಜಿ ಶಾಸಕ ಸಿಟಿ ರವಿ ಹಾಗೂ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿಚಾರವಾಗಿ ಚರ್ಚೆ ನಡೆದಿದೆ. ಆದ್ರೆ ಅದು ಇನ್ನೂ ಅಂತಿಮಗೊಂಡಿಲ್ಲ. ಆಡಳಿತರೂಢ ಕಾಂಗ್ರೆಸ್‌ ಸರ್ಕಾರ ತಮ್ಮ ವಿರುದ್ಧ ಯಾವುದೇ ಟೀಕೆಗಳಿಗೆ ಬಿಜೆಪಿಯವರಿಗೆ ನಿಮ್ಮಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯೇ ಆಗಿಲ್ಲ. ಮೊದಲು ಅದು ಮಾಡಿ ಎಂದು ಕೌಂಟರ್‌ ಕೊಡುತ್ತಲೇ ಬಂದಿತ್ತು. ಹೀಗಾಗಿ ಈ ಬಗ್ಗೆ ಚರ್ಚೆ ಇನ್ನು ಇದ್ದೇ ಇದೆ.

ಅವರ ಪಕ್ಷದಲ್ಲಿ ಏನು ನಡೆಯುತ್ತಿದೆ ಅನ್ನೋದು ನಮಗೆ ಬೇಕಿಲ್ಲ. ನಾವೂ ಯಾರ ಜೊತೆಗೂ ಕೈ ಜೋಡಿಸುವುದಿಲ್ಲ. ಲೋಕಸಭಾ ಚುನಾವಣೆಗೆ ನಾವೂ ಯಾರೊಂದಿಗೂ ಕೈಜೋಡಿಸಿಲ್ಲ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವೂ ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment