ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯನ್ನು ಗೆಲ್ಲಯವುದಕ್ಕಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿಯಿಂದ ಪದೇ ಪದೇ ಕೇಂದ್ರ ನಾಯಕರ ಆಗಮನವಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಬಂದಿದ್ದ ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ನಾಯಕರಿಗೆ ಮಹತ್ವದ ಸಂದೇಶ ನೀಡಿ ಹೋಗಿದ್ದಾರೆ.
ಕರ್ನಾಟಕದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವುದು ಬೆಂಗಳೂರು. 28 ಕ್ಷೇತ್ರವಿರುವ ಬೆಂಗಳೂರಿನಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಮೂರು ಪಕ್ಷಗಳು ಪ್ರಯತ್ನ ನಡೆಸುತ್ತಿವೆ. ಬಿಜೆಪಿಯ ಅಮಿತ್ ಶಾ ಕೂಡ ತಮ್ಮ ನಾಯಕರಿಗೆ ಇದೇ ಟಾರ್ಗೆಟ್ ನೀಡಿದ್ದಾರೆ. 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ ಗೆಲ್ಲಲೇಬೇಕೆಂದು ಸೂಚನೆ ನೀಡಿದ್ದಾರೆ.
ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರಿನಲ್ಲಿ ಮತ್ತೆ ಬಿಜೆಪಿ ತನ್ನ ಪ್ರಾಬಲ್ಯ ಮೆರೆಯಲು ಸೂಚನೆ ನೀಡಿದ್ದಾರೆ. ಆದ್ರೆ ಇಂದು ಅಮಿತ್ ಶಾ ಅನುಪಸ್ಥಿತಿಯಲ್ಲಿಯೇ ಸಭೆಯನ್ನು ನಡೆಸಲಾಗಿದೆ. ಚುನಾವಣಾ ಉಸ್ತುವಾರಿಗಳು ಈ ಅಭೆ ನಡೆಸಿದ್ದು, ಈ ಸಭೆಯಲ್ಲಿ ಬೆಂಗಳೂರಿನದ್ದೆ ಹೆಚ್ಚು ಪ್ರಸ್ತಾಪವಾಗಿದೆ ಎನ್ನಲಾಗಿದೆ.