Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಡೀನ್ ಸೇರಿ ಹಲವರಿಂದ 39 ಯೂನಿಟ್ ರಕ್ತದಾನ

---Advertisement---

 

ಚಿತ್ರದುರ್ಗ. ಜೂನ್.22: ಪ್ರತಿಯೊಂದು ರಕ್ತದಾನವೂ ಹಲವು ಜೀವಗಳನ್ನು ಉಳಿಸುವ ಸಾಮಥ್ರ್ಯ ಹೊಂದಿದೆ. ಹೀಗಾಗಿ ಸಾರ್ವಜನಿಕರು, ವಿಶೇಷವಾಗಿ ಯುವಜನರು ನಿಯಮಿತವಾಗಿ ರಕ್ತದಾನ ಮಾಡುವ ಸಂಸ್ಕøತಿಯನ್ನು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆಯ ಎಸ್.ಎಸ್. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉಪಪ್ರಾಂಶುಪಾಲರಾದ ಡಾ. ಶಶಿಕಲಾ ಪಿ. ಹೇಳಿದರು.

 

ನಗರದ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‍ಐ) ಪೆಥಾಲಜಿ ವಿಭಾಗ ಹಾಗೂ ರಕ್ತಕೇಂದ್ರದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಿದ್ದ ‘ವಿಶ್ವ ರಕ್ತದಾನಿಗಳ ದಿನಾಚರಣೆ’ ಹಾಗೂ ‘ರಕ್ತದಾನ ಶಿಬಿರ’ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಿದೆ. ರಕ್ತದಾನ ಮಾಡಲು ದಾನಿಗಳು ದೈಹಿಕವಾಗಿ ಯೋಗ್ಯರಾಗಿರುವುದು ಎಷ್ಟು ಮುಖ್ಯವೋ, ರಕ್ತದಾನದ ಮಹತ್ವವನ್ನು ಅರಿತುಕೊಳ್ಳುವುದು ಅಷ್ಟೇ ಮುಖ್ಯ ಎಂದು ಅವರು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

 

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂಸಿಆರ್‍ಐ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಬಿ.ವೈ. ಯುವರಾಜ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬಿದರು. ಡೀನ್ ನಡೆಗೆ ವಿದ್ಯಾರ್ಥಿಗಳಿಂದ ಪ್ರಶಂಸೆ ವ್ಯಕ್ತವಾಯಿತು.

 

ರಕ್ತಕೇಂದ್ರದ ಅಧಿಕಾರಿ ಡಾ. ರೂಪ ಮಾತನಾಡಿ, ರಕ್ತದಾನ ಮಾಡುವ ಮುನ್ನ ರಕ್ತನಿಧಿಯಲ್ಲಿ ಎಚ್‍ಐವಿ, ಹೆಪಟೈಟಿಸ್-ಬಿ ಮತ್ತು ಸಿ, ಸಿಫಿಲಿಸ್ ಹಾಗೂ ಮಲೇರಿಯಾ ಸೇರಿದಂತೆ ಹಲವು ಕಡ್ಡಾಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಕೃತಕ ಉತ್ಪನ್ನಗಳನ್ನು ಬಳಸಲು ಸಾಧ್ಯವಿಲ್ಲ. ಹಾಗಾಗಿ ರಕ್ತದಾನವೊಂದೇ ಜೀವ ಉಳಿಸಲು ಇರುವ ಏಕೈಕ ಮಾರ್ಗ ಎಂದು ವಿವರಿಸಿದರು.

 

ಸಿಎಂಸಿಆರ್‍ಐ ವೈದ್ಯಕೀಯ ಅಧೀಕ್ಷಕಿ ಡಾ. ಮೇಘಾ ಜಿ.ಹೆಚ್. ಮಾತನಾಡಿ, ತುರ್ತು ಸಂದರ್ಭಗಳಲ್ಲಿ ಸಕಾಲಕ್ಕೆ ರಕ್ತ ಪೂರೈಕೆ ಮಾಡಿ ಜೀವ ಉಳಿಸುತ್ತಿರುವ ಜಿಲ್ಲಾ ರಕ್ತನಿಧಿಯ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಸಮಾಜಕ್ಕೆ ನಿರಂತರವಾಗಿ ಕೊಡುಗೆ ನೀಡುತ್ತಿರುವ ಸ್ವಯಂಪ್ರೇರಿತ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಪಾಲ್ಗೊಂಡಿದ್ದರು. ಒಟ್ಟು 39 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

 

ವೇದಿಕೆಯಲ್ಲಿ ಎಸ್‍ಎಸ್‍ಎಂಎಸ್ ರಕ್ತಬ್ಯಾಂಕ್ ಉಸ್ತುವಾರಿ ಅಧಿಕಾರಿ ಡಾ. ಕವಿತಾ, ಕಾರ್ಯಕ್ರಮದ ಸಂಯೋಜಕರು ಹಾಗೂ ಪೆಥಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಬಿಂದು ಬಿ.ಜೆ., ಸಹಾಯಕ ಪ್ರಾಧ್ಯಾಪಕಿ ಡಾ. ನಂದಿನಿ ಎಸ್. ನಾಯಕ್, ನಿವಾಸಿ ವೈದ್ಯರಾದ ಡಾ. ಮೋನಿಕಾ ಮತ್ತು ಡಾ. ಶಕೀಬ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now