Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಎನ್.ಚಂದ್ರಪ್ಪ ಸೋಲು ಅನಿರೀಕ್ಷಿತ : ಮಾಜಿ ಸಚಿವ ಎಚ್.ಆಂಜನೇಯ

---Advertisement---

ಸುದ್ದಿಒನ್,  ಚಿತ್ರದುರ್ಗ,  ಜೂ.4 :ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ.ಆದರೆ, ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಸೋಲು ಅನಿರೀಕ್ಷಿತ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಆಂಜನೇಯ,  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅನ್ಯ ಪಕ್ಷದವರೂ  ಮೆಚ್ಚುವಂತಹ  ಗುಣ ಸ್ವಭಾವ ಹೊಂದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪರಾಭವಗೊಳ್ಳುವ ನಿರೀಕ್ಷೆ ಇರಲಿಲ್ಲ.

ಎಲ್ಲ ಮತ ಕ್ಷೇತ್ರದಲ್ಲಿ ಸಂಪೂರ್ಣ ಗೆಲ್ಲುವ ವಾತಾವರಣವಿತ್ತು. ಜಿಲ್ಲಾ ಸಚಿವರು ಸೇರಿದಂತೆ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು  ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದರು. ಆದರೂ ಪರಾಭವಗೊಂಡಿದ್ದೇವೆ. ಅನಿರೀಕ್ಷಿತ  ಸೋಲಿನಿಂದ ಮುಖಂಡರಿಗೆ, ಕಾರ್ಯಕರ್ತರಿಗೆ  ನೋವಾಗಿರುವುದು ಸಹಜ. ಯಾರೂ ಎದೆಗುಂದುವ  ಅವಶ್ಯಕತೆ ಇಲ್ಲ. ಸುಮಾರು 6 ಲಕ್ಷಕ್ಕೂ ಅಧಿಕ ಮತಗಳನ್ನು ಬಿ.ಎನ್.ಚಂದ್ರಪ್ಪನವರಿಗೆ ಮತಚಲಾವಣೆ ಆಗಿವೆ. ಇಷ್ಟೊಂದು ಮತನೀಡಿದ ಮತದಾರರೆಲ್ಲರಿಗೂ ಎಚ್.ಆಂಜನೇಯ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment