Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ಅಮೀರ್ ಖಾನ್ – ಗೌರಿ ಸ್ಪ್ರಾಟ್

---Advertisement---

ಮುಂಬೈ.ಜುಲೈ.05: ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ಸುದೀರ್ಘ ದಿನಗಳ ಗಾಸಿಪ್‌ಗಳಿಗೆ ತೆರೆ ಎಳೆದಿರುವ ನಟ, ಗೌರಿ ಸ್ಪ್ರಾಟ್ ಅವರೊಂದಿಗೆ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮುಂಬೈನಲ್ಲಿರುವ ಆಮೀರ್ ಖಾನ್ ಅವರ ನಿವಾಸದಲ್ಲಿ ಅತ್ಯಂತ ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಜೋಡಿಯ ವಿವಾಹ ಮಹೋತ್ಸವ ಸರಳವಾಗಿ ನೆರವೇರಿದೆ.

ಯಾವುದೇ ಅದ್ದೂರಿ ತನವಿಲ್ಲದೆ ನಡೆದ ಈ ಮದುವೆ ಸಮಾರಂಭದಲ್ಲಿ ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಕಾನೂನಾತ್ಮಕವಾಗಿ ವಿವಾಹ ಪತ್ರಕ್ಕೆ ಸಹಿ ಹಾಕುವ ಮೂಲಕ ಒಂದಾಗಿದ್ದಾರೆ. ಈ ವಿಶೇಷ ಕ್ಷಣದಲ್ಲಿ ಆಮೀರ್ ಖಾನ್ ಬಿಳಿ ಬಣ್ಣದ ಸಾಂಪ್ರದಾಯಿಕ ಬಂಧ್‌ಗಲಾ ಸೂಟ್ ಧರಿಸಿ ಮಿಂಚಿದರೆ, ಗೌರಿ ಅವರು ಹೆವಿ ಜ್ಯುವೆಲ್ಲರಿ ಒಳಗೊಂಡ ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸುತ್ತಿದ್ದರು.

ವೈರಲ್ ಆಗಿರುವ ಫೋಟೋದಲ್ಲಿ ಆಮೀರ್ ಖಾನ್ ಅವರ ಪುತ್ರ ಆಜಾದ್ ರಾವ್ ಖಾನ್ ಹಾಗೂ ಅವರ ಎರಡನೇ ಪತ್ನಿ ಕಿರಣ್ ರಾವ್ ಉಪಸ್ಥಿತರಿರುವುದು ಕಂಡುಬಂದಿದೆ. ಇದರೊಂದಿಗೆ ಗೌರಿ ಅವರ ಪುತ್ರ ಕೂಡ ಈ ಆಚರಣೆಯಲ್ಲಿ ಭಾಗಿಯಾಗಿ ನವದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಸಖತ್ ಸೌಂಡ್ ಮಾಡುತ್ತಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಹೊಸ ಜೋಡಿಗೆ ಶುಭಾಶಯಗಳ ಮಳೆ ಹರಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now