ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ ಬಾಲಿವುಡ್ ಗಾಯಕ..!

suddionenews
1 Min Read

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಆಗಾಗ ಚಾಲ್ತಿಗೆ ಬರುತ್ತಲೆ ಇರುತ್ತದೆ. ಇದೀಗ ಬಾಲಿವುಡ್ ಗಾಯಕರೊಬ್ಬರು ರೋಹಿಣಿ ಸಿಂಧೂರಿ ಮೇಲೆ ಜಮೀನು ಒತ್ತುವರಿಯ ಆರೋಪ ಮಾಡಿದ್ದಾರೆ.

ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿರುವವರು. ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನು ಟ್ರಸ್ಟ್ ಒಂದಕ್ಕೆ ಸೇರಿದೆ. ಆ ಜಮೀನನ್ನು ರೋಹಿಣಿ ಸಿಂಧೂರ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಅಲ್ಲದೆ ಕರ್ನಾಟಕ ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ. ದೂರಿನ ಕಾಪಿಯ ಜೊತೆಗೆ ಒತ್ತುವರಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನ್ಯೂ ಯಲಹಂಕ ಟೌನ್ ಬಳಿ ಇರುವ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಕರ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿ ಅವರು ಸಹಕಾರ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಮೂಲಕ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

 

ಈ ಸಂಬಂಧ ಅಲಿ ದೂರು ಸಲ್ಲಿಸಿರುವುದು ಇದೇ ಮೊದಲೇನು ಅಲ್ಲ. ಈ ಹಿಂದೆಯೂ ದೂರು ಸಲ್ಲಿಕೆ ಮಾಡಿದ್ದರು. 2022ರಲ್ಲೂ ಇದೇ ವಿಚಾರಕ್ಕೆ ದೂರು ನೀಡಿದ್ದರು. ಇದೀಗ ಮತ್ತೆ ಅದೇ ಆರೋಪ ಮಾಡಿದ್ದು, ಟ್ವಿಟ್ಟರ್ ನಲ್ಲಿ ನ್ಯೂ ಯಲಹಂಕ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ಜೊತೆಗೆ ರೋಹಿಣಿ ಸಿಂಧೂರಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿರುವ ಅಲಿ, ದೂರಿನ ಪ್ರತಿಯನ್ನು ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks