ಬೆಂಗಳೂರು: ಇತ್ತಿಚೆಗಷ್ಟೇ ಖ್ಯಾತ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿ, ಆತಂಕದ ವಾತಾವರಣ ಸೃಷ್ಟಿಸಿದ್ದರು. ಇದೀಗ, ರಾಜಭವನಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ. ರಾಜಭವನಕ್ಕೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಇದರಿಂದ ಸ್ವಲ್ಪ ಹೊತ್ತು ಎಲ್ಲರು ಗಾಬರಿಯಾಗಿದ್ದರು.
ಕೂಡಲೇ ಪೊಲೀಸರು ಅಲರ್ಟ್ ಆದರು. ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಗಳನ್ನು ಕರೆಸಿದ್ದಾರೆ. ನಿನ್ನೆ ರಾತ್ರಿ 11.30ಕ್ಕೆ ಕರೆ ಮಾಡಿದ್ದಾನೆ. ಕೂಡಲೇ ಪರಿಶೀಲನೆ ಮಾಡಲಾಗಿದೆ. ವಿಧಾನಸಭಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಕರೆ ಮಾಡಿದ ವ್ಯಕ್ತಿಯ ಫೋನ್ ನಂಬರ್ ಟ್ರ್ಯಾಕ್ ಮಾಡಲಾಗುತ್ತಿದೆ. ಬಾಂಬ್ ಬೆದರಿಕೆ ಹಾಕಿದ್ದು ಯಾರು ಮಬ ಹುಡುಕಾಟ ನಡೆಯುತ್ತಿದೆ. ಕರೆ ಬಂದ ಕೂಡಲೇ ಅಲ್ಲಿದ್ದ ಸಿಬ್ಬಂದಿಗಳಿಗೂ ಗಾಬರಿಯಾಗಿದ್ದಾರೆ. ತಕ್ಷಣ ಅಲರ್ಟ್ ಕೂಡ ಆಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











