ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತನ ಹತ್ಯೆಯಿಂದಾಗಿ ಇಡೀ ಮಂಗಳೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಜಿಲ್ಲಾಧಿಕಾರಿಗಳ ಕಚೇರಿಗೇನೆ ಬಾಂಬ್ ಬೆದರಿಕೆಯ ಕರೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಹಾಕಲಾಗಿದೆ. ಇಂದು ಮಧ್ಯಾಹ್ನ 3 ಗಂಟೆ ಒಳಗೆ ಬ್ಲಾಸ್ಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ವ್ಯಕ್ತಿ. ತಕ್ಷಣವೇ ಎಲ್ಲರೂ ಅಲರ್ಟ್ ಆಗಿದ್ದಾರೆ.
ಚಾಮರಾಜನಗರ ಜಿಲ್ಲಾಧಿಕಾರಿಯ ಕಚೇರಿಗೆ ಬ್ಲಾಸ್ಟ್ ಮಾಡುವ ಕರೆ ಬರುತ್ತಿದ್ದಂತೆ ಚಾಮರಾಜನಗರ ಜಿಲ್ಲಾಡಳಿತ ಸಂಪೂರ್ಣವಾಗಿ ಎಚ್ಚೆತ್ತುಕೊಂಡಿದೆ. ತಕ್ಷಣವೇ ಚಾಮರಾಜನಗರದ ಜಿಲ್ಲಾಧಿಕಾರಿಗಳು ಎಸ್ಪಿ ಕವಿತಾಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದವರನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಲಾಗಿದೆ. ಜೊತೆಗೆ ಈ ಸಂಬಂಧ ಚಾಮರಾಜನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಬೆದರಿಕೆ ಬಂದ ಇ-ಮೇಲ್ ಅನ್ನು ತಪಾಸಣೆ ಮಾಡುತ್ತಿದ್ದಾರೆ. ಯಾವ ವ್ಯಕ್ತಿ ಬೆದರಿಕೆ ಒಡ್ಡಿದ್ದು ಎಂಬ ಮಾಹಿತಿ ಸಿಕ್ಕರೆ ಅಂದು ಪೊಲೀಸ್ ಇಲಾಖೆ ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೆ ಬಿಡುವುದಿಲ್ಲ.
ಇನ್ನು ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಬೆದರಿಕೆಯ ಕರೆ ಬಂದಿದೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೂ ಬೆದರಿಕೆಯ ಇ – ಮೇಲ್ ಬಂದಿದ್ದು, ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದವರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಬಳಿಕ ಪೊಲೀಸರು ಬಂದು ತಪಾಸಣೆ ಮಾಡಿದ್ದಾರೆ. ಅರೆಕ್ಷಣಾ ಈ ಬೆದರಿಕೆ ಬಂಡುಕೋರರು ಎಲ್ಲರ ಜೀವ ಬಾಯಿಗೆ ಬರಿಸಿದ್ದರು. ಸದ್ಯ ಈಗ ಯಾವ ಬಾಂಬ್ ಇಲ್ಲ ಎಂಬ ವಿಚಾರ ತಿಳಿದ ಮೇಲೆ ಎಲ್ಲರೂ ಶಾಂತವಾಗಿದ್ದಾರೆ.






