Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸೆಪ್ಟಂಬರ್ 27 ರಂದು ಪದವಿ ಕಾಲೇಜುಗಳ ತರಗತಿ ಬಹಿಷ್ಕರಿಸಿ : ಎಐಡಿಎಸ್ಓ ಮನವಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ಸೆಪ್ಟೆಂಬರ್ 27ರಂದು ನಡೆಯುತ್ತಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರದ ಕುರಿತು ಇಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಪದವಿ ಕಾಲೇಜು, ಕಲಾ ಕಾಲೇಜು ಹಾಗೂ ಮಹಿಳಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಯಿತು. ಮತ್ತು ವಿದ್ಯಾರ್ಥಿಗಳ ನಡುವೆ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಐಡಿಎಸ್ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರ್ ಮಾತನಾಡಿ ಈ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲದಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಯುಜಿಸಿ ನಿಯಮಗಳು ಒಂದೆಡೆಯಾದರೆ, ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆ ಇನ್ನೊಂದೆಡೆ. ಇದರ ನಡುವೆ ವಿದ್ಯಾರ್ಥಿಗಳು ಶೈಕ್ಷಣಿಕ ನಷ್ಟ ಅನುಭವಿಸುವಂತಾಗಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರೆದು, ದಿನಗಳು ಉರುಳುತ್ತಾ ಇದ್ದರೂ ಈ ಸಮಸ್ಯೆ ಪರಿಹಾರವಾಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಆದ್ದರಿಂದ, ಕೂಡಲೇ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳು ಎದುರಿಸುತ್ತಿರುವ ಶೈಕ್ಷಣಿಕ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ. ಈಗಾಗಲೇ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಈಗ ಮುಂದುವರೆದು, ಸೆಪ್ಟೆಂಬರ್ 27ರಂದು ರಾಜ್ಯಾದ್ಯಂತ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ರಾಜ್ಯವಾಪಿ ನಡೆಯುತ್ತಿರುವ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರದಲ್ಲಿ ಭಾಗವಹಿಸಿ ಐಕ್ಯತೆಯನ್ನು ಪ್ರದರ್ಶಿಸಲು ಕರೆ ನೀಡಲಾಯಿತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...