ಬೆಂಗಳೂರು: ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಶಾಸಕ ಬಿ.ಆರ್. ಪಾಟೀಲ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕರು ಆಗಿರು ಬಿ.ಆರ್ ಪಾಟೀಲ್ ಅವರು, ರಾಜ್ಯ ಕಾಂಗ್ರೆಸ್ ವಿರುದ್ಧ ಈ ಹಿಂದೆ ಪತ್ರ ಬರೆಯುವ ಮೂಲಕ ಸಮರ ಸಾರಿದ್ದರು. ಇದೀಗ ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗಿದೆ.
ಬಿ.ಆರ್. ಪಾಟೀಲ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಗೆ ಹಾಕಿದ್ದರು. ಇದೀಗ ದಿಢೀರ್ ಅಂತ ಬಿ.ಆರ್.ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಪಾಟೀಲ್ ಅವರು ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು.

ಶಾಸಕ ಬಿ.ಆರ್. ಪಾಟೀಲ್ ಅವರು ಸಚಿವರಾಗಬೇಕೆಂದು ಆಕಾಂಕ್ಷೆ ಹೊಂದಿದ್ದರು. ಆದರೆ ಆಗ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್ ಕಲಬುರಗಿ ಜಿಲ್ಲೆಯಿಂದ ಅಡ್ಡಲಾಗಿದ್ದರು. ಹೀಗಾಗಿ ಬಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಲಹೆಗಾರರಾಗಿ ತೆಗೆದುಕೊಳ್ಳಲಾಗಿತ್ತು. ಈ ಹಿಂದೆ ಬಿ ಆರ್ ಪಾಟೀಲ್ ಅವರು ಸರ್ಕಾರ ಹಾಗೂ ಸಚಿವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಗೆ ಹಾಕಿದ್ದರು. ಇದೇ ರೀತಿ ಕಾಂಗ್ರೆಸ್ ಬಸವರಾಜರಾಯ ರೆಡ್ಡಿ ಕೂಡ ಹಲವು ಬಾರಿ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿ ಮಾಡಿದ್ದರು. ಈ ಇಬ್ಬರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವರಾಯರೆಡ್ಡಿ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ, ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















