Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜೀನಾಮೆ ನೀಡಿದ್ದಕ್ಕೆ ನಿಜವಾದ ಕಾರಣ ತಿಳಿಸಿದ ಬಿ.ಆರ್.ಪಾಟೀಲ್..!

---Advertisement---

ಬೆಂಗಳೂರು: ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಬಿ.ಆರ್.ಪಾಟೀಲ್ ಅವರು ತಮ್ಮ ಹುದ್ದೆಗೆ ನಿನ್ನೆ ರಾಜೀನಾಮೆ ನೀಡಿದ್ದಾರೆ. ಆದರೆ ನಿನ್ನೆ ರಾಜೀನಾಮೆ ನೀಡಿದ್ದೇಕೆ ಎಂಬ ವಿಚಾರವನ್ನು ಬಹಿರಂಗ ಪಡಿಸಿರಲಿಲ್ಲ. ಇದೀಗ ಆ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ತೆಗೆದುಕೊಳ್ಳಲ್ಲ ಎಂದು ತಿಳಿಸಿದ್ದಾರೆ.

ನಿನ್ನೆ, ಮೊನ್ನೆ ರಾಜೀನಾಮೆ ನೀಡಿದ್ದೇನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ವಿವರವಾಗಿ ಪತ್ರದಲ್ಲಿ ಬರೆದಿದ್ದೇನೆ. ಸಿದ್ದರಾಮಯ್ಯ ಅವರು ಕರೆ ಮಾಡಿದರೆ ಅವರೊಂದಿಗೆ ಖಂಡಿತ ಮಾತನಾಡುತ್ತೇನೆ. ರಾಜೀನಾಮೆ ನೀಡುವುದಕ್ಕೆ ಹಲವು ಕಾರಣಗಳಿವೆ. ಅದೆಲ್ಲವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಹಾಗೇ ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಾಸ್ ಪಡೆಯುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದಾಗಿ ನಮ್ಮ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ, ಅಲ್ಲದೆ ನಾನು ಸುಖಾಸುಮ್ಮನೆ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳು ಇರುವ ಕಾರಣದಿಂದ ನಾನು ರಾಜೀನಾಮೆ ನೀಡಿದ್ದೇನೆ. ಇನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿರುವುದು ವಿಶೇಷವೇನಲ್ಲ. ನಾನು ಮೊದಲೇ ರಾಜೀನಾಮೆ ಕೊಡಬೇಕಿತ್ತು. ಆದರೆ ಈಗ ರಾಜೀನಾಮೆ ನೀಡುವ ಸಂದರ್ಭ ಬಂದಿದೆ ಎಂದಿದ್ದಾರೆ.

ನಾನು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಎರಡನೇ ಪತ್ರ ಬರೆದಿದ್ದೇನೆ. ಮುಡಾ ಕೇಸ್‌ನಿಂದಾಗಿ ಸಿದ್ದರಾಮಯ್ಯ ಅವರು ಸದ್ಯ ಬಹಳ ಒತ್ತಡದಲ್ಲಿದ್ದಾರೆ. ಕೊನೆವರೆಗೂ ನನ್ನೊಂದಿಗೆ ಇರುವುದಾಗಿ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ. ಇದರಿಂದ ನನಗೆ ಯಾವ ಅಸಮಾಧಾನವೂ ಇಲ್ಲ. ಸಚಿವ ಸ್ಥಾನ ಸಿಗದ ಕಾರಣ ಕೊನೆಗೆ ಕ್ಷೇತ್ರಕ್ಕಾದರೂ ಹೆಚ್ಚಿನ ಅನುದಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದರು. ಇದು ಸಾಧ್ಯವಾಗದ ಕಾರಣ ಅವರು ಮನನೊಂದು ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...