Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ : ಕೆ.ಎನ್.ರಾಜಣ್ಣ

---Advertisement---

ತುಮಕೂರು: ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ ಆಗ್ತಾ ಇದೆ. ದಲಿತರಲ್ಲಿ ಹೋಮ – ಹವನ ಮಾಡಿಸುವುದು ಹೆಚ್ಚಾಗಿದೆ. ದೈವಭಕ್ತಿಯು ಜಾಸ್ತಿಯಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿ ತಪ್ಪು ಎಂದು ಹೇಳುವುದಿಲ್ಲ. ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕಿದೆ. ಇತ್ತೀಚಿನ ದಿನಗಳಲ್ಲಿ ಪೂಜೆ – ಹೋಮ ಮಾಡಿಸುವವರು ನಾವೇ. ಹವನ ಮಾಡಿಸುವವರು ನಾವೇ ಎಂದಿದ್ದಾರೆ.

ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಚರಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಈ ಬಗ್ಗೆ ಮಾತನ್ನಾಡಿದ್ದಾರೆ. ಹವನ ಮಾಡಿಸುವುದು ನಾವೇ, ಕಾಣಿಕೆ ಕೊಡುವುದು ನಾವೇ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಾಸ್ತವ ಸತ್ಯವನ್ನು ಜನರಿಗೆ ಅರ್ಥ ಮಾಡಿಸಬೇಕು. ವಾಸ್ತವಿಕತೆಯಿಂದ ದೂರ ಹೋಗಬಾರದು. ವಾಸ್ತವಿಕತೆಯ ಸತ್ಯ ಸಂಗತಿಗಳನ್ನು ನಿರ್ಭೀತಿಯಿಂದ ಹೇಳಿ ಜನರಲ್ಲಿ ಅರಿವು ಮೂಡಿಸಬೇಕು. ಸತ್ಯ ಹೇಳುವುದನ್ನು ಎಲ್ಲಾ ಯುವಕರು ಕಲಿಯಬೇಕು.

ಇತಿಹಾಸ ಅರಿಯದೆ ಇತಿಹಾಸ ನಿರ್ಮಾಣ ಮಾಡುವುದಕ್ಕೆ ಸಾಧ್ಯವಿಲ್ಲ. ನಮಗೆ ನಾವೇ ಕೆಳವರ್ಗ ಅಂತ ಯಾಕೆ ಹೇಳಿಕೊಳ್ಳಬೇಕು. ಮತ್ತು ಮೇಲ್ವರ್ಗ ಅಂತ ಹೇಳಿಕೊಳ್ಳುವುದರ ಬದಲು ಹಿಂದುಳಿದವರು ಮತ್ತು ಮುಂದುವರೆದವರು ಅಂತ ಹೇಳಿಕೊಳ್ಳಲಿ. ಯಾರೆಲ್ಲ ಬಡವರು ಇರುತ್ತಾರೆ, ಅಸಹಾಯಕರು ಇರುತ್ತಾರೆ, ದನಿ‌ ಇಲ್ಲದವರು ಇರುತ್ತಾರೆ, ಶೋಷಿತ ಸಮುದಾಯ ಇರುತ್ತದೆ, ಅವರು ಯಾವತ್ತೂ ಕೂಡ ಇನ್ನೊಬ್ಬರಿಗೆ ಮೋಸ ಮಾಡುವಂತಹ, ಅನ್ಯಾಯ ಮಾಡುವಂತಹ, ಸುಳ್ಳು ಹೇಳುವಂತಹ ಕೆಲಸವನ್ನು ಮಾಡುವುದಿಲ್ಲ. ನಾವೂ ಬೇರೆಯವರಿಗಿಂತ ಬುದ್ಧಿವಂತರಿದ್ದೇವೆ. ಹಾಗಾಗಿ ನಾವ್ಯಾಕೆ ಕೆಳವರ್ಗದವರು ಅಂತ ಹೇಳಿಕೊಳ್ಳಬೇಕು. ಇದು ಸರಿಯಾದ ಚಿಂತನೆಯಲ್ಲ. ಕೆಳವರ್ಗ ಎನ್ನುವುದನ್ನ ನಾನು ಒಪ್ಪುವುದಿಲ್ಲ ಎಂಬ ಮಾತನ್ನ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)