ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಅಕ್ಕಿ ಕೊರತೆಯಿಂದಾಗಿ, ಐದು ಕೆಜಿ ಅಕ್ಕಿ, ಇನ್ನುಳಿ ಐದು ಕೆಜಿಗೆ ಹಣ ನೀಡುತ್ತಿದೆ. ಇದೀಗ ಅಕ್ಟೋಬರ್ ಅಥವಾ ನವೆಂಬರ್ ತಿಂಗಳ ಬಳಿಕ ಆ ಹಣಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಈಗಾಗಲೇ ತೆಲಂಗಾಣದ ಜೊತೆಗೆ ಮಾತುಕತೆ ನಡೆದಿದೆ. ಅಲ್ಲಿಂದ ಅಕ್ಕಿ ಖರೀದಿ ಮಾಡಲು ನಿರ್ಧಾರ ಮಾಡಿ ಆಗಿದೆ. ಈಗಾಗಲೇ ಅಲ್ಲಿನ ಸರ್ಕಾರದ ಜೊತೆಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಮಾತನಾಡಿದ್ದಾರೆ. ಹೀಗಾಗಿ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಹತ್ತು ಕೆಜಿ ಅಕ್ಕಿ ಕೊಡುವುದಕ್ಕೆ ನಿರ್ಧಾರ ಮಾಡಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಮುನಿಯಪ್ಪ, ಅಕ್ಟೋಬರ್ ತಿಂಗಳಿನಲ್ಲಿಯೇ ಅನ್ನಭಾಗ್ಯ ಯೋಜನೆಗೆ ಪೂರ್ಣಪ್ರಮಾಣದಲ್ಲಿ ಅಕ್ಕಿ ನೀಡಲು ಕ್ರಮವಹಿಸಲಾಗುತ್ತಿದೆ. ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಶೀಘ್ರವೇ ಅಕ್ಕಿ ಪೂರೈಕೆ ಮಾಡಲಾಗುತ್ತದೆ. ಬರ ಸನ್ನಿವೇಶವಿದ್ದರೂ, ಮುಂದೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇಷ್ಟು ದಿನ ಅಕ್ಕಿಯ ಬದಲಿಗೆ ಒಬ್ಬೊಬ್ಬರ ಖಾತೆಗೆ 170 ರೂಪಾಯಿ ಅಂತೆ ಹಣ ನೀಡಲಾಗುತ್ತಿತ್ತು. ಹಣದ ಬದಲು ಅಕ್ಕಿಯನ್ನೇ ನೀಡಬೇಕು ಎಂದು ಬಿಜೆಪಿ ಕೂಡ ಆಗ್ರಹಿಸಿತ್ತು. ಇದೀಗ ಸಿದ್ದರಾಮಯ್ಯ ಸರ್ಕಾರ ಎಲ್ಲಾ ಯೋಜನೆಯನ್ನು ಯಶಸ್ವಿ ಮಾಡಿದ್ದು, ಈಗ ಅಕ್ಕಿಭಾಗ್ಯ ಯೋಜನೆಯನ್ನು, ಎಲ್ಲಿಯೂ ವಿಫಲವಾಗದಂತೆ ನೋಡಿಕೊಳ್ಳಲು, ಕೊಟ್ಟ ಮಾತಿನಂತೆ ಅಕ್ಕಿಯನ್ನೇ ನೀಡಲು ತಯಾರಿ ನಡೆಸಿದೆ. ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಒಬ್ಬರಿಗೆ ಹತ್ತು ಕೆಜಿಯಂತೆ ಅಕ್ಕಿ ನೀಡಲಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…