Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಮನೆಯಲ್ಲಾಯ್ತು ಈಗ ಡಿಕೆಶಿ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್

---Advertisement---

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಕದನ ಎಷ್ಟು ಜೋರಾಗಿತ್ತು ಅಂದ್ರೆ ಹೈಕಮಾಂಡ್ ತನಕವೂ ಹೋಗಿತ್ತು. ಬಳಿಕ ಇಬ್ಬರು ಮೊದಲು ಕೂತು ಮಾತಾಡಿ ಎಂದಾಗ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗದ ಅರೆಂಜ್ ಮಾಡಲಾಗಿತ್ತು. ಅಲ್ಲಿಂದ ನಾವಿಬ್ಬರು ಒಂದೇ ಎಂಬ ಒಗ್ಗಟ್ಟಿನ ಮಂತ್ರ ಸಾರಿದ್ದರು. ಇದೀಗ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಗೆ ಆಹ್ವಾನ ಮಾಡಿದ್ದಾರೆ.

ಈ ಹಿಂದೆ ಅಂದ್ರೆ 2023ರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ‌ ಮನೆಗೆ ಬ್ರೇಕ್ ಫಾಸ್ಟ್ ಗೆ ಅಂತ ಡಿಕೆ ಬ್ರದರ್ಸ್ ಕರೆದಿದ್ದರು. ಸಿದ್ದರಾಮಯ್ಯ ಅವರನ್ನು ಇಬ್ಬರು ಸ್ವಾಗತ ಮಾಡಿದ್ದರು. ಇದೀಗ ಈ ವರ್ಷ ಮತ್ತೊಮ್ಮೆ ಬ್ರೇಕ್ ಫಾಸ್ಟ್ ಗೆ ಆಹ್ವಾನ ನೀಡಿದ್ದಾರೆ. ಮೀಟಿಂಗ್ ನಲ್ಲಿ ಏನೆಲ್ಲಾ ಚರ್ಚೆಗಳು ನಡೆಯಬಹುದು ಎಂಬ ಕುತೂಹಲವೂ ಇದೆ.

ಈ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡುತ್ತಾ, ನಾನು ಮತ್ತು ಸಿದ್ದರಾಮಯ್ಯ ಇಬ್ಬರು ಬ್ರದರ್ಸ್ ರೀತಿ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ಡಿಸಿಎಂ ಒಂದು ಗುಂಪು, ಸಿಡಂ ಅವರದ್ದು ಒಂದು ಗುಂಪು ಎಂದು ನೀವೂ ಮಾಧ್ಯಮಗಳಲ್ಲಿ ಹೇಳುತ್ತಿದ್ದೀರಿ. ಆದರೆ ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ನಾವೂ ಹುಟ್ಟುವಾಗ ಒಬ್ಬರೆ, ಸಾಯುವಾಗಲೂ ಒಬ್ಬರೆ. ಹೀಗಾಗಿ ಯಾವುದೇ ಗುಂಪು ಏಕೆ ಬೇಕು..? ನೀವೆಲ್ಲಾ ಏನೇನೋ ತೋರಿಸುತ್ತಿದ್ದೀರಾ. ಸಿದ್ದರಾಮಯ್ಯ ಅವರದ್ದು ಒಂದು ಗುಂಪು ಮತ್ತು ಡಿಕೆಶಿ ಅವರದ್ದು ಒಂದು ಗುಂಪು ಅಂತ ತೋರಿಸುತ್ತಿದ್ದೀರಾ.140 ಜನ ಶಾಸಕರು ಒಟ್ಟಿಗೆ ಇದ್ದಾರೆ. ಎಲ್ಲರನ್ನೂ ಕರೆದೊಯ್ಯುವ ಕೆಲಸ ಮಾಡುತ್ತಿದ್ದೇವೆ ಅಷ್ಟೇ ಎಂಬ ಮಾತನ್ನ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now