Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಬೆಳಗಾವಿಯಲ್ಲಿ `ಹೀಟರ್ ಸ್ಟ್ರೋಕ್’ಗೆ ಮತ್ತೊಂದು ಬಲಿ

---Advertisement---

ಸುದ್ದಿಒನ್,ಬೆಳಗಾವಿ,ಮೇ08:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿ ಹೀಟ್ ಸ್ಟ್ರೋಕ್‌ನಿಂದಾಗಿ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.

ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಮತ್ತು ಬಿಸಿ ಗಾಳಿಯ ಅಬ್ಬರ ಹೆಚ್ಚಾಗುತ್ತಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ವಾರದ ಸಂತೆಯಲ್ಲಿ ವ್ಯಾಪಾರ ನಿರತರಾಗಿದ್ದ ವರ್ಧಮಾನ ಮಗದುಮ ಎಂಬುವವರು ಬಿಸಿಲಿನ ತಾಪ ತಾಳಲಾರದೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದಾಗ ಕುಸಿದು ಬಿದ್ದ ವರ್ಧಮಾನ ಅವರನ್ನು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now