Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಬಾಲಿವುಡ್  ನಟಿ ರಾಣಿ ಮುಖರ್ಜಿ ತಾಯಿ ಕೃಷ್ಣಾ ಮುಖರ್ಜಿ ನಿಧನ

---Advertisement---

ಮುಂಬೈ: ಖ್ಯಾತ ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರ ತಾಯಿ ಕೃಷ್ಣಾ ಮುಖರ್ಜಿ (75) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಈ ದುಃಖದ ವಿಚಾರವನ್ನು ಯಶ್ ರಾಜ್ ಫಿಲ್ಮ್ಸ್ (YRF) ಅಧಿಕೃತ ಹೇಳಿಕೆಯ ಮೂಲಕ ಖಚಿತಪಡಿಸಿದೆ.

ರಾಣಿ ಮುಖರ್ಜಿ ಅವರ ತಾಯಿ ಶ್ರೀಮತಿ ಕೃಷ್ಣಾ ಮುಖರ್ಜಿ ಅವರು ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ ಎಂಬುದನ್ನು ಭಾರವಾದ ಹೃದಯದಿಂದ ತಿಳಿಸುತ್ತಿದ್ದೇವೆ. ಈ ಅಪಾರ ದುಃಖದ ಸಮಯದಲ್ಲಿ ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಬೆಂಬಲಕ್ಕೆ ಕುಟುಂಬವು ಕೃತಜ್ಞವಾಗಿದೆ. ದುಃಖದ ಈ ಕ್ಷಣದಲ್ಲಿ ಕುಟುಂಬದ ಖಾಸಗಿತನವನ್ನು ಗೌರವಿಸಬೇಕಾಗಿ ವಿನಂತಿಸುತ್ತೇವೆ ಎಂದು ಯಶ್ ರಾಜ್ ಫಿಲ್ಮ್ಸ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷ್ಣಾ ಮುಖರ್ಜಿ ಅವರು ಬೆಂಗಾಲಿ ಚಿತ್ರರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ಹಲವಾರು ಸಾರ್ವಜನಿಕ ಸಮಾರಂಭಗಳಲ್ಲಿ ಅವರು ಮಗಳು ರಾಣಿ ಮುಖರ್ಜಿ ಜೊತೆ ಕಾಣಿಸಿಕೊಳ್ಳುತ್ತಿದ್ದರು. ರಾಣಿ ಮುಖರ್ಜಿ ಕೂಡ ತಮ್ಮ ತಾಯಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಬಗ್ಗೆ ಹಲವು ಸಂದರ್ಶನಗಳಲ್ಲಿ ನೆನೆದಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Join WhatsApp

Join Now

Join Telegram

Join Now