Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ರಾಜ್ಯದಲ್ಲಿ 1 ಲಕ್ಷ ಸರ್ಕಾರಿ, 5 ಲಕ್ಷ ಖಾಸಗಿ ಉದ್ಯೋಗ ಸೃಷ್ಟಿ, ನಿರಾಶ್ರಿತರಿಗೆ 5 ಲಕ್ಷ ನಿವೇಶನ ಹಂಚಿಕೆ : ಸಿಎಂ ಡಿಕೆಶಿ ಘೋಷಣೆ

---Advertisement---

ಬೆಂಗಳೂರು.ಸೆಪ್ಟೆಂಬರ್.10 : ರಾಜ್ಯ ಸರ್ಕಾರವು 100 ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ದೃಢ ಕರ್ನಾಟಕದ ಸಂಕಲ್ಪ’ ಸಮಾವೇಶದಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯನ್ನೊಳಗೊಂಡ ‘ಮಹಾಸಂಕಲ್ಪ’ ಮತ್ತು ‘ನವಸಂಕಲ್ಪ’ ಯೋಜನೆಗಳನ್ನು ಘೋಷಿಸಿದರು.

ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸಂಪುಟದ ಸದಸ್ಯರು ಹಾಗೂ ರೈತರು, ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

2037ರ ಮಹಾಸಂಕಲ್ಪದ ಪ್ರಮುಖ ಗುರಿಗಳು

1 ಟ್ರಿಲಿಯನ್ ಡಾಲರ್ ಆರ್ಥಿಕತೆ: 2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಮೊತ್ತದ ಬೃಹತ್ ಆರ್ಥಿಕತೆಯನ್ನಾಗಿ ರೂಪಿಸುವುದು.

ಶೂನ್ಯ ಬಡತನ ಹಾಗೂ ಶಿಕ್ಷಣ ಸುಧಾರಣೆ: ರಾಜ್ಯದಲ್ಲಿ ಬಡತನ ರೇಖೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಮತ್ತು ಶಾಲೆಯಿಂದ ಹೊರಗುಳಿಯುವ ಮಕ್ಕಳ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು.

ಅಪೌಷ್ಟಿಕತೆ ನಿಯಂತ್ರಣ: ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ಅಪೌಷ್ಟಿಕತೆಯ ಪ್ರಮಾಣವನ್ನು ಶೇಕಡ 5ಕ್ಕಿಂತ ಕೆಳಗೆ ತರುವುದು.

ಮುಂದಿನ 500 ದಿನಗಳ ‘ನವಸಂಕಲ್ಪ’ ಯೋಜನೆಗಳು:

ಬಂಡವಾಳ ಹೂಡಿಕೆ: ಮುಂಬರುವ 500 ದಿನಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ₹1.5 ಲಕ್ಷ ಕೋಟಿ ವಿನಿಯೋಗ ಹಾಗೂ ಒಟ್ಟಾರೆಯಾಗಿ ₹3 ಲಕ್ಷ ಕೋಟಿ ಮೊತ್ತದ ಹೊಸ ಖಾಸಗಿ ಹೂಡಿಕೆಯನ್ನು ಆಕರ್ಷಿಸುವ ಗುರಿ.

ಉದ್ಯೋಗಾವಕಾಶ: ಸಾರ್ವಜನಿಕ ವಲಯದಲ್ಲಿ 1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ ಹಾಗೂ ಖಾಸಗಿ ಕ್ಷೇತ್ರದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿ.

ನಗರಾಭಿವೃದ್ಧಿ ಮತ್ತು ವಸತಿ: ರಾಜ್ಯದಲ್ಲಿ 5 ಹೊಸ ಮಹಾನಗರಗಳ ನಿರ್ಮಾಣ ಹಾಗೂ ವಸತಿರಹಿತರಿಗೆ 5 ಲಕ್ಷ ನಿವೇಶನಗಳ ಹಂಚಿಕೆ.

ನೀರು ಮತ್ತು ಪರಿಸರ: ಮೇಕೆದಾಟು ಹಾಗೂ ಎತ್ತಿನಹೊಳೆ ಜಲ ಭದ್ರತಾ ಯೋಜನೆಗಳಿಗೆ ತ್ವರಿತ ವೇಗ ನೀಡುವುದು. ಬೆಂಗಳೂರಿನಲ್ಲಿ 5 ಹೊಸ ಲಾಲ್‌ಬಾಗ್ ಮಾದರಿಯ ಉದ್ಯಾನವನಗಳ ನಿರ್ಮಾಣ ಹಾಗೂ 7 ಪ್ರಮುಖ ಕೆರೆಗಳ ಸಮಗ್ರ ಪುನರುಜ್ಜೀವನ.

“ಆರ್ಥಿಕವಾಗಿ ಸಬಲ, ಸಾಮಾಜಿಕವಾಗಿ ಸಮಾನ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ನವ ಭಾರತ ನಿರ್ಮಾಣಕ್ಕೆ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಧ್ಯೇಯ,” ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

 

Join WhatsApp

Join Now

Join Telegram

Join Now