ಸುದ್ದಿಒನ್,ಚಿತ್ರದುರ್ಗ,ಮೇ.11: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯು ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಚಿತ್ರದುರ್ಗದ ಚಳ್ಳಕೆರೆ-ಪಾವಗಡ ರಸ್ತೆಯಲ್ಲಿರುವ ಜೈನ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು.ಸಚಿವರ ಪಾರ್ಥಿವ ಶರೀರಕ್ಕೆ ಅವರ ಪುತ್ರ ಸುಹಾಸ್ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು.
ಸಚಿವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸುಧಾಕರ್ ಅವರು ಒಬ್ಬ ದಕ್ಷ ಸಂಘಟಕರಾಗಿದ್ದರು, ಅವರ ಸಾವು ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟ” ಎಂದು ಕಂಬನಿ ಮಿಡಿದರು.
ಅಂತ್ಯಕ್ರಿಯೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಕುಶಾಲತೋಪು ಸಿಡಿಸುವ ಮೂಲಕ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಅಂತಿಮ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿ ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ವಿದಾಯ ಕೋರಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















