ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಸುಮಾರು 14 ವರ್ಷಗಳ ಬಳಿಕ ಪ್ರಕರಣ ಮತ್ತೆ ಚರ್ಚೆಗೆ ಬಂದಿದ್ದು, ಸುಪ್ರೀಂ ಕೋರ್ಟ್ ಸಿಬಿಐಗೆ ತನಿಖಾ ವರದಿ ಸಲ್ಲಿಸಲು ಸೂಚಿಸಿದೆ.2012ರ ಅಕ್ಟೋಬರ್‌ನಲ್ಲಿ ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದು, ಮರುದಿನ ಅರಣ್ಯ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿತ್ತು. ನಂತರ ನಡೆದ ತನಿಖೆಯಲ್ಲಿ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿತ್ತು.
ಪ್ರಕರಣದ ಪ್ರಾರಂಭಿಕ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ನಡೆಸಿದ ಬಳಿಕ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಸಂತೋಷ್ ರಾವ್ ಎಂಬಾತನನ್ನು ಬಂಧಿಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು.ಈ ವೇಳೆ ನ್ಯಾಯಾಲಯ ತನಿಖಾ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿ, ನಿಜವಾದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿದೆ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಎಲ್ಲಾ ಅಂಶಗಳನ್ನು ಪರಿಗಣಿಸಿ ಸಿಬಿಐಗೆ ತನಿಖಾ ವರದಿ ಸಲ್ಲಿಸಲು ಸೂಚಿಸಿದೆ. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.ಈ ಬೆಳವಣಿಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವ ಸಾಧ್ಯತೆಯನ್ನು ಮತ್ತೆ ಜೀವಂತಗೊಳಿಸಿದ್ದು, ಮುಂದಿನ ಕ್ರಮಗಳತ್ತ ಸಾರ್ವಜನಿಕರ ಗಮನ ಹರಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















