Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Breking :ನೀಟ್ ಹಗರಣ ಪ್ರತಿಭಟನೆಗೆ ಹೊಸ ತಿರುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಣೆ, ಪತ್ರದಲ್ಲಿ ಕಾರಣ ವಿವರ

---Advertisement---

ನವದೆಹಲಿ: ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆ ಈಡೇರಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ರಾಜೀನಾಮೆ ಪತ್ರವನ್ನು ಹಂಚಿಕೊಂಡಿರುವ ಅವರು, ಸುದೀರ್ಘ ಪತ್ರದ ಮೂಲಕ ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ.
ಈ ಬೆಳವಣಿಗೆಗೆ ಹಿನ್ನೆಲೆಯಾಗಿ 2026ರ NEET-UG ಪರೀಕ್ಷೆ ಹಗರಣ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮೇ 3, 2026ರಂದು ನಡೆದ ಪರೀಕ್ಷೆಯನ್ನು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದರು. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದಿದ್ದು, ಸುಮಾರು 120 ಪ್ರಶ್ನೆಗಳು ವಾಟ್ಸಾಪ್ ಮೂಲಕ ಹರಡಿದ್ದವು ಎನ್ನಲಾಗಿದೆ. ಈ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಕೇಂದ್ರ ಸರ್ಕಾರ ಮೇ 12ರಂದು ಪರೀಕ್ಷೆಯನ್ನು ರದ್ದುಪಡಿಸಿ, ಜೂನ್ 21ರಂದು ಮರುಪರೀಕ್ಷೆ ನಡೆಸಲು ನಿರ್ಧರಿಸಿತ್ತು.ಈ ಗೊಂದಲ, ಒತ್ತಡ ಮತ್ತು ಅನಿಶ್ಚಿತತೆಯ ನಡುವೆ ಕನಿಷ್ಠ 12 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಈ ಘಟನೆ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ವರ್ಷಗಳ ಕಾಲ ಶ್ರಮಪಟ್ಟು, ಸಾಕಷ್ಟು ಹಣ ವ್ಯಯಿಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಪರೀಕ್ಷಾ ವ್ಯವಸ್ಥೆಯ ವೈಫಲ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಸಿಬಿಎಸ್‌ಇ (CBSE) ಸೇರಿದಂತೆ ಇತರ ಸಾರ್ವಜನಿಕ ಪರೀಕ್ಷೆಗಳಲ್ಲೂ ಪದೇಪದೇ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿಬರುತ್ತಿರುವುದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now