Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಲೇಹ್-ಲಡಾಖ್‌ನಲ್ಲಿ 5.5 ತೀವ್ರತೆಯ ಭೂಕಂಪ

---Advertisement---

ಲೇಹ್-ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್‌ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ನೀಡಿರುವ ಮಾಹಿತಿ ಪ್ರಕಾರ, ಆಗಸ್ಟ್ 13ರಂದು ಬೆಳಗ್ಗೆ 6:05:15ಕ್ಕೆ ಭೂಕಂಪ ಸಂಭವಿಸಿದೆ.

ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಲೇಹ್-ಲಡಾಖ್ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದು 36.881° ಉತ್ತರ ಅಕ್ಷಾಂಶ ಹಾಗೂ 74.402° ಪೂರ್ವ ರೇಖಾಂಶದಲ್ಲಿತ್ತು ಎಂದು NCS ತಿಳಿಸಿದೆ.

ಭೂಕಂಪದ ಕಂಪನದ ತೀವ್ರತೆ ಹಾಗೂ ಇದರಿಂದ ಉಂಟಾಗಿರುವ ಹಾನಿ, ಸಾವು-ನೋವುಗಳ ಕುರಿತು ಸದ್ಯ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಲಡಾಖ್‌ನಲ್ಲಿ ಬೆಳಗಿನ ಜಾವ ಸಂಭವಿಸಿದ ಈ ಭೂಕಂಪದಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

 

Join WhatsApp

Join Now

Join Telegram

Join Now