Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗ್ಡೆ ನಿಧನ

---Advertisement---

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಗಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಡಿ.ಕೆ.ಶಿವಕುಮಾರ್, ನನ್ನ ಆತ್ಮೀಯ ಸಹೋದ್ಯೋಗಿ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಪಕ್ಷಕ್ಕೆ ಅನನ್ಯ ಕೊಡುಗೆ ನೀಡಿದ್ದ ನಾಯಕ’

ಸೂರಜ್ ಹೆಗ್ಗಡೆ ಅವರ ಪಕ್ಷದ ಸೇವೆಯನ್ನು ಸ್ಮರಿಸಿದ ಮುಖ್ಯಮಂತ್ರಿಗಳು, “ತಮ್ಮ ಅದ್ಭುತ ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು. ಪಕ್ಷದ ಸಾಮಾನ್ಯ ಕಾರ್ಯಕರ್ತರೊಂದಿಗೂ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಒಬ್ಬ ಸಕ್ರಿಯ ಮತ್ತು ಜನಪ್ರಿಯ ನಾಯಕನನ್ನು ಇಂದು ನಾವು ಕಳೆದುಕೊಂಡಿದ್ದೇವೆ, ಈ ಅತ್ಯಂತ ಕಷ್ಟದ ಸಮಯದಲ್ಲಿ ಭಗವಂತನು ಮೃತರ ಕುಟುಂಬದ ಸದಸ್ಯರಿಗೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ಈ ಅಗಲಿಕೆಯ ವೇದನೆಯನ್ನು ಸಹಿಸುವ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now