ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಹಿರಿಯ ಕೆ.ಎ.ಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಎಂ.ಎನ್. ಅವರನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಇಂದು ಆದೇಶ ಹೊರಡಿಸಿದೆ.
ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಕೆ.ಎ.ಎಸ್ (ಸೂಪರ್ ಟೈಂ ಸ್ಕೇಲ್) ಅಧಿಕಾರಿಯಾಗಿರುವ ಡಾ. ರಾಜೇಂದ್ರ ಪ್ರಸಾದ್ ಎಂ.ಎನ್. ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿದೆ.


ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















