ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸೆಪ್ಟೆಂಬರ್ 12 ಮತ್ತು 13 ರಂದು ಆಯೋಜಿಸಲಾಗಿರುವ ಈ ಮಹತ್ವದ ಶೃಂಗಸಭೆಯಲ್ಲಿ ಅಧ್ಯಕ್ಷ ಜಿನ್‌ಪಿಂಗ್ ಖುದ್ದು ಪಾಲ್ಗೊಳ್ಳಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ.
ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಹಾಗೂ ಗಡಿ ಬೆಳವಣಿಗೆಗಳ ನಡುವೆ, ಭಾರತದ ಆತಿಥ್ಯದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಜಿನ್‌ಪಿಂಗ್ ಅವರ ಭೇಟಿ ಜಾಗತಿಕ ಮಟ್ಟದಲ್ಲಿ ಭಾರೀ ಕುತೂಹಲ ಮೂಡಿಸಿದೆ.
At the invitation of Prime Minister of India, Narendra Modi, Chinese President Xi Jinping will attend the 18th BRICS Summit in New Delhi from September 12 to 13: Chinese Ministry of Foreign Affairs pic.twitter.com/1bfG1VqSS2
— ANI (@ANI) September 10, 2026











