Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ : ನಾಳೆ ಬೆಳಗ್ಗೆ 10.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ?

---Advertisement---

ಸುದ್ದಿಒನ್,ಬೆಂಗಳೂರು,ಮೇ.27: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ತೆರೆಮರೆಯ ಆಟ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ರಾಜ್ಯದ ನಾಯಕತ್ವ ಬದಲಾವಣೆಯ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಸದ್ಯದಲ್ಲೇ ತೆರೆ ಬೀಳಲಿದ್ದು, ಕಾಂಗ್ರೆಸ್ ಹೈಕಮಾಂಡ್ನ ಖಡಕ್ ಆದೇಶದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸ್ಫೋಟಕ ಮಾಹಿತಿ ರಾಜಕೀಯ ವಲಯದಿಂದ ಹೊರಬಿದ್ದಿದೆ.

ಪಕ್ಷದ ವರಿಷ್ಠರ ಸೂಚನೆಗೆ ತಲೆಬಾಗಿರುವ ಸಿದ್ದರಾಮಯ್ಯ, ತಮ್ಮ ಮುಂದಿನ ಹೆಜ್ಜೆಯನ್ನಿಡುವ ಮುನ್ನ ಆಪ್ತ ವಲಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದೇ ಕಾರಣಕ್ಕೆ ನಾಳೆ (ಗುರುವಾರ) ಮುಂಜಾನೆ ಸಿಎಂ ನಿವಾಸದಲ್ಲಿ ವಿಶೇಷ ಉಪಹಾರಕೂಟವನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಎದುರಾಗಿರುವ ಅನಿವಾರ್ಯತೆ ಹಾಗೂ ಹೈಕಮಾಂಡ್ ನಿರ್ಧಾರದ ಹಿಂದಿನ ಅಸಲಿ ಕಾರಣಗಳನ್ನು ಸಚಿವರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ತುರ್ತು ಉಪಹಾರಕೂಟ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳು ನೇರವಾಗಿ ರಾಜಭವನದತ್ತ ಮುಖ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳ ಕಚೇರಿಯಿಂದ (CMO) ಈಗಾಗಲೇ ಸಮಯ ನಿಗದಿಪಡಿಸಲಾಗಿದೆ. ಈ ಅಧಿಕೃತ ಭೇಟಿಯ ವೇಳೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಹಸ್ತಾಂತರಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿತ್ತು. ಪಕ್ಷದ ಒಳಗಿನ ಒಪ್ಪಂದಗಳು ಹಾಗೂ ದೆಹಲಿ ಮಟ್ಟದಲ್ಲಿ ನಡೆದ ಸರಣಿ ಮಾತುಕತೆಗಳ ಫಲವಾಗಿ ಹೈಕಮಾಂಡ್ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ನಿರ್ಗಮನದ ಸುದ್ದಿ ತಿಳಿಯುತ್ತಿದ್ದಂತೆಯೇ, ಕರ್ನಾಟಕದ ಮುಂದಿನ ಸಾರಥಿ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆ ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾಗಿದೆ. ಹೈಕಮಾಂಡ್ ಈಗಾಗಲೇ ಹೊಸ ನಾಯಕನ ಪಟ್ಟಾಭಿಷೇಕಕ್ಕೆ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸುತ್ತಿದ್ದು, ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಹೊಸ ಸರ್ಕಾರದ ರಚನೆಗೆ ವೇದಿಕೆ ಸಿದ್ಧವಾಗಲಿದೆ. ಈ ದಿಢೀರ್ ಬೆಳವಣಿಗೆಗಳು ಸದ್ಯ ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಮುಂದಿನ ಕೆಲವು ಗಂಟೆಗಳು ಅತ್ಯಂತ ನಿರ್ಣಾಯಕವಾಗಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now