Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!

ಸಚಿವ ಪರಮೇಶ್ವರ್
---Advertisement---

ಸುದ್ದಿಒನ್,ಬೆಂಗಳೂರು,ಮೇ.27:ಕರ್ನಾಟಕ ರಾಜಕೀಯದ ‘ಮಹಾ ಕುರುಕ್ಷೇತ್ರ’ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಕಳೆದ ಕೆಲವು ದಿನಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ಅಧಿಕಾರದ ಆಟ ಈಗ ಬಹಿರಂಗವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಂಧಾನ ನಡೆಸಿ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಳೆ (ಗುರುವಾರ) ಬೆಂಗಳೂರಿನಲ್ಲಿ ತಮ್ಮ ಸರ್ಕಾರದ ಎಲ್ಲಾ ಸಚಿವರು ಹಾಗೂ ಶಾಸಕರಿಗೆ ಹಠಾತ್ ‘ಬ್ರೇಕ್ಫಾಸ್ಟ್ ಮೀಟಿಂಗ್’ (ಉಪಹಾರ ಕೂಟ) ಕರೆದಿದ್ದಾರೆ. ಇದರ ಬೆನ್ನಲ್ಲೇ ಅವರು ರಾಜ್ಯಪಾಲರ ಭೇಟಿಗೆ ಸಮಯ ಕೇಳಿರುವುದು ಸಿಎಂ ರಾಜೀನಾಮೆ ಫಿಕ್ಸ್ ಎಂಬ ವದಂತಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ನೀಡಿದೆ.

ವರದಿಗಳ ಪ್ರಕಾರ, ಹೈಕಮಾಂಡ್ ನಾಯಕರೊಂದಿಗಿನ ಚರ್ಚೆಯ ವೇಳೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಮುಂದೆ ಬಿಗ್ ಷರತ್ತೊಂದನ್ನು ಇಟ್ಟಿದ್ದಾರೆ ಎನ್ನಲಾಗಿದೆ.ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಗೌರವ ಕೊಟ್ಟು ನಾನು ಮುಖ್ಯಮಂತ್ರಿ ಗಾದಿ ಬಿಡಲು ಸಿದ್ಧ. ಆದರೆ, ನನ್ನ ಸೀಟಿನಲ್ಲಿ ಮುಂದಿನ ಸಿಎಂ ಆಗಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರನ್ನೇ ಕೂರಿಸಬೇಕು,” ಎಂದು ಸಿದ್ದರಾಮಯ್ಯ ನೇರವಾಗಿಯೇ ಹಠ ಹಿಡಿದಿದ್ದಾರೆ ಎನ್ನಲಾಗಿದೆ.

ಮುಂದಿನ ಸಿಎಂ ರೇಸ್ ಗೆ ಜಿ. ಪರಮೇಶ್ವರ್ ಅವರ ಹೆಸರನ್ನು ಸಿದ್ದರಾಮಯ್ಯ ಹೈಲೈಟ್ ಮಾಡಿರುವುದರ ಹಿಂದೆ ದೊಡ್ಡ ರಾಜಕೀಯ ತಂತ್ರಗಾರಿಕೆಯೇ ಅಡಗಿದೆ. ಪರಮೇಶ್ವರ್ ಅವರಿಗೆ ಇರುವ ದಶಕಗಳ ರಾಜಕೀಯ ಅನುಭವ, ಈ ಹಿಂದೆ ಸುದೀರ್ಘ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಇತಿಹಾಸ ಮತ್ತು ಅವರ ಕ್ಲೀನ್ ಇಮೇಜ್ ಆಡಳಿತವನ್ನು ಸಿದ್ದರಾಮಯ್ಯ ಹೈಕಮಾಂಡ್ ನಾಯಕರಿಗೆ ನೆನಪಿಸಿದ್ದಾರೆ. ಅನುಭವ ಮತ್ತು ಅರ್ಹತೆಯ ಆಧಾರದ ಮೇಲೆ ಪರಮೇಶ್ವರ್ ಅವರೇ ಈ ಸ್ಥಾನಕ್ಕೆ ನೂರಕ್ಕೆ ನೂರು ಸೂಕ್ತ ವ್ಯಕ್ತಿ ಎಂಬುದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now