Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಜೂನ್ 3ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ

---Advertisement---

ಸುದ್ದಿಒನ್,ಬೆಂಗಳೂರು,ಮೇ.30 : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಗುಡ್‌ಬೈ ಹೇಳಿದ ಬೆನ್ನಲ್ಲೇ, ರಾಜ್ಯದ ಮುಂದಿನ ನಾಯಕ ಯಾರು ಎಂಬ ಕುತೂಹಲಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಬರುವ ಜೂನ್ 3ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಇಂದೇ ಶಾಸಕಾಂಗ ಪಕ್ಷದ ಸಭೆ: ‘ಕನಕಪುರ ಬಂಡೆ’ಗೆ ಸಿಗಲಿದೆಯೇ ನಾಯಕತ್ವ?
ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಅಧಿಕೃತವಾಗಿ ಘೋಷಿಸಲು ಇಂದು (ಶನಿವಾರ) ಅತ್ಯಂತ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯನ್ನು ಕರೆಯಲಾಗಿದೆ. ಈ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಆ ಮೂಲಕ ಡಿಕೆಶಿ ಅವರ ಸಿಎಂ ಪಟ್ಟಾಭಿಷೇಕಕ್ಕೆ ಇದ್ದ ಕೊನೆಯ ಹಂತದ ಪ್ರಕ್ರಿಯೆಯೂ ಸುಗಮವಾಗಲಿದೆ.

ಪ್ರಮುಖ ಅಪ್ಡೇಟ್: ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ ಪತ್ರ ನೀಡಿದ್ದರು. ರಾಜ್ಯಪಾಲರು ಸಹ ಈ ರಾಜೀನಾಮೆಯನ್ನು ಅಂಗೀಕರಿಸಿದ್ದು, ತಿಂಗಳುಗಳಿಂದ ನಡೆಯುತ್ತಿದ್ದ ‘ಮುಂದಿನ ಸಿಎಂ ಯಾರು?’ ಎಂಬ ಹೈಡ್ರಾಮಾಕ್ಕೆ ಸದ್ಯ ಪೂರ್ಣವಿರಾಮ ಬಿದ್ದಿದೆ.

ಜೂನ್ 3ಕ್ಕೆ ಡಿಕೆಶಿ ಪಟ್ಟಾಭಿಷೇಕ ಫಿಕ್ಸ್?
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅತ್ಯಂತ ಸಂಕಷ್ಟದ ಸಮಯದಲ್ಲೂ ಮುನ್ನಡೆಸಿ, ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ದೊಡ್ಡದಿದೆ. ಟ್ರಬಲ್ ಶೂಟರ್ ಎಂದೇ ಹೆಸರಾಗಿರುವ ಡಿಕೆಶಿ, ಇದೀಗ ಜೂನ್ 3ರಂದು ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಅಭಿಮಾನಿಗಳಲ್ಲಿ ಮತ್ತು ಕೈ ಪಾಳಯದಲ್ಲಿ ಭಾರಿ ಸಂಭ್ರಮ ಮನೆಮಾಡಿದೆ.

Join WhatsApp

Join Now

Join Telegram

Join Now