ಸುದ್ದಿಒನ್, ಬೆಂಗಳೂರು, ಜೂನ್ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಡಿಕೆಶಿ ಜೊತೆಗೆ ಡಾ.ಜಿ.ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೋಕಭವನದ ಗಾಜಿನಮನೆಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ನೂತನ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
Bengaluru: Dr G Parameshwara takes oath as the Deputy Chief Minister of Karnataka.
(Pic Source: Congress) pic.twitter.com/1wa7Fcn7Lw
— ANI (@ANI) June 3, 2026

ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತ್ಯಂತ ಅಪರೂಪದ ಹಾಗೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಬಾರಿಯ ಪ್ರಮಾಣವಚನ ಕಾರ್ಯಕ್ರಮದ ಮುಖ್ಯಾಂಶವೆಂದರೆ, ರಾಜ್ಯದ ಇತಿಹಾಸದಲ್ಲೇ ಹಿಂದೆಂದೂ ಇಲ್ಲದ ರೀತಿಯಲ್ಲಿ ಎಲ್ಲಾ ಧರ್ಮಗಳ ಸ್ವಾಮೀಜಿಗಳು ಹಾಗೂ ಧರ್ಮಗುರುಗಳನ್ನು ಏಕಕಾಲದಲ್ಲಿ ಆಹ್ವಾನಿಸಲಾಗಿತ್ತು. ಸರ್ವ ಧರ್ಮಗಳ ಪೀಠಾಧೀಶರ ದಿವ್ಯ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಗದ್ದುಗೆ ಏರುವ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಗ್ರ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.
















