ದೆಹಲಿ.ಜುಲೈ.27: ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ವಾರಗಳಿಂದ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಬಹುನಿರೀಕ್ಷಿತ ‘ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ವಿಧೇಯಕ’ವನ್ನು (Anti-Paper Leak Bill) ಮಂಡಿಸಿದೆ.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ವಿರೋಧ ಪಕ್ಷದ ನಾಯಕರ ತೀವ್ರ ಗದ್ದಲ ಮತ್ತು ನಿರಂತರ ಸರ್ಕಾರ ವಿರೋಧಿ ಘೋಷಣೆಗಳ ನಡುವೆಯೇ ಈ ಪ್ರಮುಖ ವಿಧೇಯಕವನ್ನು ಲೋಕಸಭೆಯ ಅಂಗಳದಲ್ಲಿ ಮಂಡಿಸಿದರು.
#WATCH | Union Minister Jitendra Singh introduces Public Examinations (Prevention of Unfair Means) Amendment Bill, 2026 in Lok Sabha. pic.twitter.com/lq1lZ9lNAo
— ANI (@ANI) July 27, 2026
ಕಳೆದ ಕೆಲವು ವಾರಗಳಿಂದ ದೇಶಾದ್ಯಂತ ‘ನೀಟ್’ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಈ ಹಿನ್ನೆಲೆಯಲ್ಲಿ ದೇಶದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ಪರೀಕ್ಷಾ ಅಕ್ರಮ ಮತ್ತು ಸೋರಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಸೋದೆಯನ್ನು ತಂದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












