ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಎಸಿ ಬಸ್‌ನಲ್ಲಿ ಏಕಾಏಕಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 9 ಪ್ರಯಾಣಿಕರು ಸಜೀವ ದಹನಗೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಈ ಸ್ಲೀಪರ್ ಎಸಿ ಬಸ್ಸು ಸುಮಾರು 35ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಮಹೋಬಾ ಕಡೆಗೆ ತೆರಳುತ್ತಿತ್ತು. ಯಮುನಾ ಎಕ್ಸ್‌ಪ್ರೆಸ್‌ವೇ ಮಾರ್ಗದಲ್ಲಿ ಚಲಿಸುತ್ತಿದ್ದ ವೇಳೆ ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ಇಡೀ ಬಸ್ಸನ್ನು ಆವರಿಸಿಕೊಂಡ ಪರಿಣಾಮ ಬಸ್ ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿದೆ.
ದುರಂತ ಸಂಭವಿಸಿದ ವೇಳೆ ಬಹುತೇಕ ಪ್ರಯಾಣಿಕರು ನಿದ್ರೆಯಲ್ಲಿದ್ದರು. ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿ ಆವರಿಸಿಕೊಂಡಿದ್ದರಿಂದ ಪ್ರಯಾಣಿಕರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕೆಲವರು ಬಸ್‌ನಿಂದ ಹೊರಜಿಗಿದು ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದು, ಅವರಲ್ಲಿ ಹಲವರಿಗೆ ಗಾಯಗಳಾಗಿವೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಬೆಂಕಿಯನ್ನು ನಂದಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
UP Chief Minister Yogi Adityanath took cognizance of the road accident in Greater Noida. The Chief Minister expressed condolences to the families of the deceased. The Chief Minister directed officials to ensure proper medical treatment for the injured. The Chief Minister spoke to… https://t.co/udoxnMaZrk
— ANI (@ANI) September 24, 2026










