Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಅಫ್ಘಾನಿಸ್ತಾನದ ಮಾಜಿ ವೇಗದ ಬೌಲರ್ ಶಾಪುರ್ ಜದ್ರಾನ್ ನಿಧನ

---Advertisement---

ದೆಹಲಿ.ಜುಲೈ.07: ಅಫ್ಘಾನಿಸ್ತಾನ ಕ್ರಿಕೆಟ್‌ನ ಆರಂಭಿಕ ದಿನಗಳ ಪ್ರಮುಖ ಆಟಗಾರ ಹಾಗೂ ಮಾಜಿ ವೇಗದ ಬೌಲರ್ ಶಾಪುರ್ ಜದ್ರಾನ್ (38) ಅವರು ಸುದೀರ್ಘ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ.

ಅಪರೂಪದ ಮತ್ತು ಜೀವಕ್ಕೆ ಕಂಟಕವಾಗುವ ‘ಹೆಮೊಫಾಗೊಸೈಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್’ (HLH) ಎಂಬ ರೋಗನಿರೋಧಕ ಶಕ್ತಿಯ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ನವದೆಹಲಿಯ ಆಸ್ಪತ್ರೆಯೊಂದರಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ವಿಷಯವನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದು, ಇಡೀ ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ.

ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಜದ್ರಾನ್ ತಾಯ್ನಾಡಿನಲ್ಲಿ ಮೊದಲ ಬಾರಿಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಜನವರಿಯಲ್ಲಿ ಅವರನ್ನು ಭಾರತಕ್ಕೆ ಕರೆತರಲಾಗಿತ್ತು. ಅವರ ಸಹೋದರ ಘಮೈ ಜದ್ರಾನ್ ಮತ್ತು ಅಫ್ಘಾನಿಸ್ತಾನದ ಮಾಜಿ ನಾಯಕ ಅಸ್ಘರ್ ಅಫ್ಘಾನ್ ಅವರು ಜದ್ರಾನ್ ಜೊತೆಯಲ್ಲೇ ಇದ್ದು ಚಿಕಿತ್ಸೆಯ ಮೇಲ್ವಿಚಾರಣೆ ನಡೆಸುತ್ತಿದ್ದರು.

ಶಾಪುರ್ ಜದ್ರಾನ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ

ಅಫ್ಘಾನಿಸ್ತಾನ ಕ್ರಿಕೆಟ್‌ನ ಭದ್ರ ಬುನಾದಿ ಹಾಕಿದವರಲ್ಲಿ ಶಾಪುರ್ ಜದ್ರಾನ್ ಪ್ರಮುಖರು. ಅವರ ಸಮರ್ಪಣಾ ಭಾವ, ಉತ್ಸಾಹ ಮತ್ತು ಕ್ರಿಕೆಟ್ ಮೇಲಿನ ಬದ್ಧತೆ ದೇಶದಲ್ಲಿ ಕ್ರಿಕೆಟ್ ಬೆಳವಣಿಗೆಗೆ ಪ್ರಮುಖ ಕಾರಣವಾಗಿತ್ತು. ಅಫ್ಘಾನ್ ಕ್ರಿಕೆಟ್ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುವಲ್ಲಿ ಅವರ ಪಾತ್ರ ಮರೆಯಲಾಗದ್ದು,” ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಎಡಗೈ ವೇಗದ ಬೌಲರ್ ಆಗಿದ್ದ ಶಾಪುರ್ ಜದ್ರಾನ್, ಅಫ್ಘಾನಿಸ್ತಾನ ತಂಡ ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಹೆಜ್ಜೆಯಿಟ್ಟು ಇಂದಿನ ಉನ್ನತ ಸ್ಥಾನಕ್ಕೇರಲು ಅತ್ಯಂತ ಪ್ರಮುಖ ಕಾರಣಕರ್ತರಾಗಿದ್ದರು. ಅವರ ನಿಧನಕ್ಕೆ ಜಾಗತಿಕ ಕ್ರಿಕೆಟ್ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now