Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

---Advertisement---

ಉಡುಪಿ.ಸೆಪ್ಟೆಂಬರ್.20: ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ರಸ್ತೆ ಅಪಘಾತಕ್ಕೊಳಗಾದ ಘಟನೆ ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ನಡೆದಿದೆ.

ಮಾಜಿ ಸಚಿವರ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ರಮಾನಾಥ್ ರೈ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರು ಚಾಲಕ ಹಾಗೂ ಅವರ ಆಪ್ತ ಸಹಾಯಕ ಸೇರಿದಂತೆ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join WhatsApp

Join Now

Join Telegram

Join Now