Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ

---Advertisement---

ಸುದ್ದಿಒನ್,ನವದೆಹಲಿ,ಜೂನ್.02: ತಮಿಳುನಾಡಿನ ಬಿಜೆಪಿಯ ಅತ್ಯಂತ ಪ್ರಭಾವಿ ಹಾಗೂ ಫೈರ್‌ಬ್ರಾಂಡ್ ನಾಯಕ ಎಂದೇ ಹೆಸರಾಗಿದ್ದ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಹೊಸ ಹಾದಿ ಹಿಡಿಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಅದಕ್ಕೀಗ ಅಧಿಕೃತ ಮುದ್ರೆ ಬಿದ್ದಂತಾಗಿದೆ. ದೆಹಲಿಗೆ ಭೇಟಿ ನೀಡಿರುವ ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯ ನಾಯಕರಾದ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಖಾಕಿ ಕಳಚಿ ರಾಜಕೀಯಕ್ಕೆ ಬಂದಾಗಿನಿಂದಲೂ ತಮಿಳುನಾಡಿನಲ್ಲಿ ಬಿಜೆಪಿಯ ಪ್ರಮುಖ ಮುಖವಾಗಿದ್ದರು. ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರ ಕಾರಣವೇನು ಎಂಬುದು ಇನ್ನು ನಿಗೂಢವಾಗಿದ್ದರೂ, ರಾಜಕೀಯ ಪಡಸಾಲೆಯಲ್ಲಿ ಹಲವು ಚರ್ಚೆಗಳು ಶುರುವಾಗಿವೆ.

ತಮಿಳುನಾಡಿನಲ್ಲಿ ಕಮಲ ಅರಳಿಸಲೇಬೇಕು ಎಂದು ಅಣ್ಣಾಮಲೈ ಅವರು ‘ಎನ್ ಮಣ್ಣ್, ಎನ್ ಮಕ್ಕಳ್’ (ನನ್ನ ಮಣ್ಣು, ನನ್ನ ಜನ) ಎಂಬ ಬೃಹತ್ ಪಾದಯಾತ್ರೆ ನಡೆಸಿ ಅಬ್ಬರದ ಪ್ರಚಾರ ಮಾಡಿದ್ದರು. ಆದರೆ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲ. ಈ ಸೋಲಿನ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಅಣ್ಣಾಮಲೈ ಅವರ ಆಕ್ರಮಣಕಾರಿ ಮತ್ತು ನೇರ ನಡೆ ನುಡಿಯ ರಾಜಕಾರಣ ಪಕ್ಷದ ಒಳಗಿನ ಕೆಲವು ಹಿರಿಯ ನಾಯಕರಿಗೆ ಇಷ್ಟವಿರಲಿಲ್ಲ. ಮೈತ್ರಿ ವಿಚಾರ ಹಾಗೂ ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳೇ ಅವರು ಈ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.
ಸದ್ಯಕ್ಕಂತೂ ಅಣ್ಣಾಮಲೈ ತಮ್ಮ ಮುಂದಿನ ಯೋಜನೆಯನ್ನು ಬಹಿರಂಗಪಡಿಸಿಲ್ಲ. ಆದರೆ, ಅವರು ಹೊಸ ರಾಜಕೀಯ ಪಕ್ಷ ಕಟ್ಟಲಿದ್ದಾರೆ ಎಂಬ ವದಂತಿಗಳು ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವುದಂತೂ ಸುಳ್ಳಲ್ಲ. ಮಾಜಿ ಸಿಂಗಂನ ಈ ನಡೆ ದ್ರಾವಿಡ ನಾಡಿನ ರಾಜಕಾರಣವನ್ನು ಯಾವ ತಿರುವಿಗೆ ಕರೆದೊಯ್ಯಲಿದೆ ಎಂಬುದನ್ನು ಕಾದುನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now