Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಸಿಎಲ್‌ಪಿ ಸಭೆಯಲ್ಲಿ ಅಧಿಕೃತ ಘೋಷಣೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.30 :ರಾಜ್ಯ ರಾಜಕೀಯದ ದೂಳೆಬ್ಬಿಸಿದ್ದ ಮಹಾ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಸಾರಥಿ ಡಿ.ಕೆ. ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಡಿಕೆಶಿ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕ್ಷಣದಿಂದಲೇ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕ ಫಿಕ್ಸ್ ಆಗಿತ್ತು. ಇಂದು ನಡೆದ ಶಾಸಕರ ಸಭೆಯಲ್ಲಿ ಅದಕ್ಕೊಂದು ಆಧಿಕೃತ ಮುದ್ರೆ ಒತ್ತಲಾಯಿತಷ್ಟೇ. ಕಳೆದ ಮೂರು ವರ್ಷಗಳಿಂದ ಸಿದ್ದರಾಮಯ್ಯ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಹಾಗೂ ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿ ಮುನ್ನಡೆದಿದ್ದ ‘ಕನಕಪುರ ಬಂಡೆ’ ಇದೀಗ ರಾಜ್ಯದ ಅತ್ಯುನ್ನತ ಗದ್ದುಗೆಯನ್ನು ಅಲಂಕರಿಸಲು ಸಜ್ಜಾಗಿದೆ.

ಶಾಸಕರ ಸೀಟಿಗೆ ಹೋಗಿ ಹಸ್ತಲಾಘವ ಮಾಡಿದ ಭಾವಿ ಸಿಎಂ!

ಸಿಎಲ್‌ಪಿ ಸಭೆಗೆ ಎಂಟ್ರಿ ಕೊಡುವ ಮುನ್ನ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಕೊಠಡಿಯಲ್ಲೇ ತಮ್ಮ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇನ್ನು ಹೈಕಮಾಂಡ್ ಪರವಾಗಿ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತರಿದ್ದರು.

ಸಭೆ ಆರಂಭವಾಗುತ್ತಿದ್ದಂತೆ ನೂತನ ನಾಯಕ ಡಿ.ಕೆ. ಶಿವಕುಮಾರ್ ಅವರು ತಾವೇ ಖುದ್ದಾಗಿ ಪ್ರತಿಯೊಬ್ಬ ಶಾಸಕರಿದ್ದ ಜಾಗಕ್ಕೆ ತೆರಳಿ, ಶೇಕ್‌ ಹ್ಯಾಂಡ್ ಮಾಡುವ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡಿದ್ದು ವಿಶೇಷವಾಗಿತ್ತು.

ಜೂನ್ 3ಕ್ಕೆ ಸಿಂಪಲ್ ಆಗಿ ಡಿಕೆಶಿ ಪ್ರಮಾಣ ವಚನ ಸ್ವೀಕಾರ

ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಶ್ರೀಗಳ ಮಾರ್ಗದರ್ಶನ ಹಾಗೂ ನಿಗದಿಪಡಿಸಿದ ಶುಭ ಮುಹೂರ್ತದಂತೆಯೇ ಪ್ರಮಾಣ ವಚನಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಬರುವ ಬುಧವಾರ (ಜೂನ್ 3) ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಮಾಡಲಿದ್ದಾರೆ.

ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ತೀರಾ ಸರಳವಾಗಿ ಈ ಕಾರ್ಯಕ್ರಮ ನಡೆಯಲಿದೆ. ಪ್ರಸ್ತುತ ರಾಜ್ಯದಲ್ಲಿನ ಇಂಧನ ಬಿಕ್ಕಟ್ಟು ಹಾಗೂ ರಾಜಧಾನಿಯ ಸಂಚಾರ ದಟ್ಟಣೆಯನ್ನು ಮನಗಂಡು, ಹೈಕಮಾಂಡ್ ಸೂಚನೆ ಮೇರೆಗೆ ಈ ಸರಳ ಆಚರಣೆಗೆ ನಿರ್ಧರಿಸಲಾಗಿದೆ.

ಒಟ್ಟಿನಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಯ ಬಳಿಕ ನಿರೀಕ್ಷೆಯಂತೆಯೇ ಡಿ.ಕೆ. ಶಿವಕುಮಾರ್ ಸಾರಥ್ಯ ವಹಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.

Join WhatsApp

Join Now

Join Telegram

Join Now