Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಳೆ ಪಿಂಚಣಿ ಭಾಗ್ಯ: ಸರ್ಕಾರದಿಂದ ಮಹತ್ವದ ಆದೇಶ.!

---Advertisement---

ಬೆಂಗಳೂರು.ಸೆಪ್ಟೆಂಬರ್..20 : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2005-06 ಮತ್ತು 2006-07ನೇ ಸಾಲಿನಲ್ಲಿ ನೇಮಕಗೊಂಡ ಶಿಕ್ಷಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2006ರ ಏಪ್ರಿಲ್ 1ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿ, ಆ ದಿನಾಂಕದಂದು ಅಥವಾ ನಂತರ ಕರ್ತವ್ಯಕ್ಕೆ ಹಾಜರಾದ ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು ಹಳೆಯ ಡಿಫೈನ್ಡ್ ಪಿಂಚಣಿ  ಸೌಲಭ್ಯದ ವ್ಯಾಪ್ತಿಗೆ ಸೇರ್ಪಡೆಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತ ಜ್ಞಾಪನ ಹೊರಡಿಸಿದೆ.

ಹಣಕಾಸು ಇಲಾಖೆಯ ಸಮ್ಮತಿಯನ್ವಯ ರಾಜ್ಯದ ಎಲ್ಲ ಜಿಲ್ಲೆಗಳ ಅರ್ಹ ಸಹ ಶಿಕ್ಷಕರಿಗೆ ಈ ಸೌಲಭ್ಯ ಅನ್ವಯವಾಗಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 2-C ಅನ್ವಯವಾಗದೆ ಭಾಗ-IV ರ ಅನ್ವಯ ಪಿಂಚಣಿ ನಿಯಮಗಳು ಜಾರಿಯಾಗಲಿವೆ.

ಈ ಆದೇಶದ ಮೇರೆಗೆ, ಹಳೆಯ ಪಿಂಚಣಿ ವ್ಯಾಪ್ತಿಗೆ ಒಳಪಡುವ ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರ ಹೆಚ್.ಆರ್.ಎಂ.ಎಸ್-2.0 ತಂತ್ರಾಂಶದಲ್ಲಿ ನಡೆಯುತ್ತಿರುವ ಎನ್.ಪಿ.ಎಸ್ ವಂತಿಗೆ ಕಡಿತವನ್ನು ತಕ್ಷಣವೇ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಜೊತೆಗೆ, ಅವರಿಗೆ ಜಿ.ಪಿ.ಎಫ್ ಖಾತೆಗಳನ್ನು ಸೃಜಿಸಿ, ಪ್ರಾಣ್ (PRAN) ಖಾತೆಯಲ್ಲಿ ಈಗಾಗಲೇ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಕೆಯನ್ನು ನಿಯಮಾನುಸಾರ ಹಿಂಪಡೆದು ಇತ್ಯರ್ಥಪಡಿಸಲು ಸಂಬಂಧಪಟ್ಟ ಅಪರ ಆಯುಕ್ತರು, ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಈ ನಿರ್ಧಾರದಿಂದಾಗಿ ದೀರ್ಘಕಾಲದಿಂದ ಹಳೆ ಪಿಂಚಣಿಗಾಗಿ ಕಾಯುತ್ತಿದ್ದ ಸಾವಿರಾರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೆಮ್ಮದಿ ಸಿಕ್ಕಂತಾಗಿದೆ.

Join WhatsApp

Join Now

Join Telegram

Join Now